ಬಂಟ್ವಾಳ ತಾಲೂಕುಮಟ್ಟದ ರಾಜ್ಯೋತ್ಸವ ಆಚರಣೆಯಲ್ಲಿ ಶಾಸಕ ರಾಜೇಶ್ ನಾಕ್ ಗೌರವ ವಂದನೆ ಸ್ವೀಕರಿಸಿದರು. ಪ್ರಮುಖರಾದ ವಿಶ್ವನಾಥ ಬಂಟ್ವಾಳ, ಜಯಂತಿ ವಿ.ಪೂಜಾರಿ, ಮಾಲತಿ, ತಾರಾನಾಥ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಭಾಷೆಯ ಶ್ರೀಮಂತ ಪರಂಪರೆ ಉಳಿಸೋಣ

ತಾಲೂಕುಮಟ್ಟದ ಕನ್ನಡ ರಾಜ್ಯೋತ್ಸವ

ಬಂಟ್ವಾಳ: ನಮ್ಮ ಪೂರ್ವಜರು ಕಟ್ಟಿ ಬೆಳೆಸಿದ ಕನ್ನಡ ನಾಡು, ಭಾಷೆ ಉಳಿಸಿ, ಬೆಳೆಸುವ ಕೆಲಸ ನಮ್ಮದಾಗಬೇಕು. ಕನ್ನಡ ಭಾಷೆಯಷ್ಟೇ ಅಲ್ಲ, ಭಾವನೆ, ನಮ್ಮ ಅಸ್ಮಿತೆ. ಮುಂದಿನ ಪೀಳಿಗೆಗೆ ಶ್ರೀಮಂತ ಪರಂಪರೆ ಉಳಿಸೋಣ ಎಂದು ಬಂಟ್ವಾಳ ತಹಸೀಲ್ದಾರ್ ಜಿ.ಮಂಜುನಾಥ್ ಹೇಳಿದರು.

ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಬಂಟ್ವಾಳ ತಾಲೂಕುಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕ ರಾಜೇಶ್ ನಾಕ್ ಅಧ್ಯಕ್ಷತೆ ವಹಿಸಿದ್ದರು. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರರಾದ ಪ್ರಾಧ್ಯಾ ವೈ.ಕುಲಾಲ್ ಮತ್ತು ನಿವೃತ್ತ ಶಿಕ್ಷಕಿ ಗ್ಲಾಡಿಯನ್ ಪಾಯಸ್ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್, ಆಶ್ನಿ ಆರ್.ಶೆಟ್ಟಿ ಉಪಸ್ಥಿತರಿದ್ದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ರಮಾನಂದ ನೂಜಿಪ್ಪಾಡಿ ವಂದಿಸಿದರು. ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಅಧಿಕಾರಿ ಸುರೇಖಾ ಯಳವರ ನಿರ್ವಹಿಸಿದರು.

ವಿದ್ಯಾರ್ಥಿಗಳಿಂದ ಮೆರವಣಿಗೆ, ಪರೇಡ್, ಬ್ಯಾಂಡ್, ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಆರಕ್ಷಕ ಇಲಾಖೆ, ಗೃಹರಕ್ಷಕ ದಳ ಮತ್ತು ವಿದ್ಯಾರ್ಥಿಗಳ ಪಥಸಂಚಲನ ನಡೆಯಿತು. ಪೊಲೀಸ್ ನಿರೀಕ್ಷಕ ಅನಂತಪದ್ಮನಾಭ ಹಾಗೂ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ಅನ್ಯಭಾಷೆಗಳ ಪ್ರಭಾವದಿಂದ ಕನ್ನಡ ಮರೆಯಾಗುತ್ತಿದೆ. ಭಾಷೆಯನ್ನು ಉಳಿಸುವ ಜವಾಬ್ದಾರಿ ನಮಗಿದೆ.
ಸಚಿನ್ ಕುಮಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ