ತಲಪಾಡಿಯಲ್ಲಿ ಲಾರಿ ಉರುಳಿ ಬಿದ್ದಿರುವುದು. 
ದಕ್ಷಿಣ ಕನ್ನಡ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಸೌಮ್ಯ ಆರ್
ಬಂಟ್ವಾಳ: ಬಿ.ಸಿ.ರೋಡಿನ ತಲಪಾಡಿ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ಮಂಗಳವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದಿದೆ.
ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ವಿದ್ಯುತ್ ಪವರ್ ಸಬ್‌ಸ್ಟೇಷನ್ ಎದುರಲ್ಲೇ ಘಟನೆ ನಡೆದಿದ್ದು, ವಿದ್ಯುತ್ ತಂತಿಗಳು ತುಂಡಾಗಿ ಹೆದ್ದಾರಿಯಲ್ಲಿ ಬಿದ್ದಿದ್ದವು. ಘಟನೆಯಿಂದಾಗಿ ಬಿ.ಸಿ.ರೋಡ್ ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ವಿದ್ಯುತ್ ಕಂಬ ಹಾಗೂ ತಂತಿಯನ್ನು ಮರುಜೋಡಿಸುವ ಕಾರ್ಯ ನಡೆಸಿದರು.