crime 
ದಕ್ಷಿಣ ಕನ್ನಡ

ದನ ಸಾಗಿಸುತ್ತಿದ್ದ ಲಾರಿ ವಶ

ಬಂಟ್ವಾಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲು

ಬಂಟ್ವಾಳ: ಕಲ್ಲಡ್ಕ ಪ್ಲೈಓವರ್ ಮೂಲಕ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕಲ್ಲಡ್ಕ ಫ್ಲೈಓವರ್‌ನಲ್ಲಿ ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ ಆರಕ್ಕೂ ಅಧಿಕ ದನಗಳು ಕಂಡು ಬಂದಿದೆ. ಮಾಹಿತಿ ಪಡೆದ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದನಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.