ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಮುಖರಾದ ಡಾ.ಮಂಜುಳಾ ಅನಿಲ್ ರಾವ್, ಪೂಜಾ ಪೈ, ಕಮಲಾಕ್ಷಿ,  
ದಕ್ಷಿಣ ಕನ್ನಡ

ಶಾಸಕಿ ವಿರುದ್ಧ ಅವಹೇಳನ ಕಠಿಣ ಕ್ರಮಕ್ಕೆ ಮಹಿಳಾ ಮೋರ್ಚಾ ಆಗ್ರಹ

ಮಂಗಳೂರು: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿಯನ್ನು ಬಂಧಿಸಿ, ಕಠಿನ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ.ಮಂಜುಳಾ ಅನಿಲ್ ರಾವ್, ಶಾಸಕಿ ಭಾಗೀರಥಿ ಮುರುಳ್ಯ ಅವರ ಅನೇಕ ಜನಪರ ಕೆಲಸಗಳನ್ನು ಸಹಿಸಲು ಆಗದ ವಿಕೃತ ಮನಸ್ಸಿ ವ್ಯಕ್ತಿ ಉದ್ದೇಶ ಪೂರ್ವಕವಾಗಿಯೇ ಅವರಿಗೆ ಅವಮಾನ ಮಾಡಿದ್ದಾನೆ. ಗುಂಪು ಗುಂಪುಗಳ ಮಧ್ಯೆ ವೈರತ್ವ ಮತ್ತು ದ್ವೇಷವನ್ನು ಹಬ್ಬಿಸಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿಯಿಂದ ಆಗಿದೆ. ಕೂಡಲೇ ಆತನನ್ನು ಬಂಧಿಸುವ ಕೆಲಸ ಆಗಬೇಕು. ಎಸ್.ಪಿ.ಯವರು ಮನವಿ ಸ್ವೀಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಕಮಲಾಕ್ಷಿ, ಪ್ರ.ಕಾರ್ಯದರ್ಶಿ ಲಖಿತಾ, ಪ್ರಮುಖರಾದ ಆಶಾ ತಿಮ್ಮಪ್ಪ, ಸುಲೋಚನಾ ಭಟ್, ಸುಳ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ, ಮಾಜಿ ಕಾರ್ಪೊರೇಟರ್ ಸುಮಂಗಳಾ ರಾವ್, ಉತ್ತರ ಮಂಡಲ ಉಪಾಧ್ಯಕ್ಷೆ ಅಮೃತಾ, ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ವೆಂಕಟ ವಳಲಂಬೆ ಮತ್ತಿತರರು ಉಪಸ್ಥಿತರಿದ್ದರು.