ಕಾಸರಗೋಡು: ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಯತ್ನಿಸಿದ ಪಶ್ಚಿಮ ಬಂಗಾಳ ಮೂಲದ ಕಟ್ಟಡ ಕಾರ್ಮಿಕ ಮಾಲಿಕ್ ಹುಸೈನ್ (21) ಎಂಬಾತನನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ತ್ರಿಕರಿಪುರ ತಂಗಯ ಎಂಬಲ್ಲಿ ಕಟ್ಟಡ ನಿರ್ಮಾಣ ಕೆಲಸಕ್ಕೆಂದು ಮಾಲಿಕ್ ಹುಸೈನ್ ಒಳಗೊಂಡ ತಂಡ ಹೋಗಿತ್ತು. ಸ್ನಾನ ಮಾಡುತ್ತಿದ್ದ ಯುವತಿಯ ದೃಶ್ಯವನ್ನು ಈತ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಯತ್ನಿಸಿದ್ದು, ಇದನ್ನು ಗಮನಿಸಿದ ಮನೆಯವರು ಬೊಬ್ಬೆ ಹಾಕಿದಾಗ ಸ್ಥಳೀಯರು ಹುಸೈನ್‌ನನ್ನು ಸೆರೆಹಿಡಿದು ಚಂದೇರ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.