ಅಬ್ದುಲ್ ಹಾಪೀಲ್ , ಜಿಯಾವುಲ್ ಹಕ್, ಅಲ್ತಾಫ್ 
ದಕ್ಷಿಣ ಕನ್ನಡ

1.58 ಕೋಟಿ ರೂ. ಮೌಲ್ಯದ ಎಂಡಿಎಂಎ ಪತ್ತೆ

ಮೂವರ ಬಂಧನ ಸಿಸಿಬಿ ಪೊಲೀಸರ ಕಾರ್ಯಾಚರಣೆ

ವಿಜಯವಾಣಿ ಸುದ್ದಿಜಾಲ ಮಂಗಳೂರು

ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕೋರಿಯರ್ ಮೂಲಕ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ನಗರ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರು ಬಂಧಿಸಿ, ಅವರಿಂದ 1,58,34,000 ರೂ. ಮೌಲ್ಯದ 1.796.96 ಕೆ.ಜಿ. ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ಮಂಗಲ್ಪಾಡಿ ನಿವಾಸಿ ಅಬ್ದುಲ್ ಹಾಪೀಲ್ (25), ಕುಳೂರು ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30), ಬಜಾಲ್ ೈಸಲ್‌ನಗರ ನಿವಾಸಿ ಅಲ್ತಾಫ್ (28) ಬಂಧಿತರು. ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಗುರುವಾರ ರಾತ್ರಿ 10 ಗಂಟೆಗೆ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1.796.96 ಕಿ.ಗ್ರಾಂ ಎಂಡಿಎಂಎ ಹಾಗೂ 3 ಮೊಬೈಲ್ ೆನ್, ಮಾದಕವಸ್ತು ಸಾಗಾಟಕ್ಕೆ ಬಳಸಿದ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಪಾಯರ್ ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಕರಣದಲ್ಲಿ ಬಂಧಿತ ಆರೋಪಿ ಜಿಯಾವುಲ್ ಹಕ್ ಎಂಬಾತನ ವಿರುದ್ಧ ದುಬೈನ ರಸ್-ಅಲ್- ಖೈಮಾ ಎಂಬಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 3 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಬಂದಿದ್ದ. ಇಲ್ಲೂ ಅದೇ ಕೃತ್ಯ ಮುಂದುವರಿಸಿದ್ದಾನೆ. ಆರೋಪಿ ಅಬ್ದುಲ್ ಹಾಪೀಲ್ ಎಂಬಾತನ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಪ್ರಕರಣ ದಾಖಲಾಗಿದೆ. ಆರೋಪಿ ಅಲ್ತ್ಾ ಎಂಬಾತನ ವಿರುದ್ಧ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.

ಪಂಜಾಬ್‌ನಿಂದ ತರಿಸುತ್ತಿದ್ದರು

ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿೈಯರ್‌ನ ನೀರು ಸಂಗ್ರಹವಾಗುವ ಸ್ಥಳದಲ್ಲಿ ಭದ್ರವಾಗಿ ಒಳಗೆ ಇರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ ನಂತರ ಈ ಮಾದಕವಸ್ತುವನ್ನು ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು.