ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕೋರಿಯರ್ ಮೂಲಕ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ನಗರ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರು ಬಂಧಿಸಿ, ಅವರಿಂದ 1,58,34,000 ರೂ. ಮೌಲ್ಯದ 1.796.96 ಕೆ.ಜಿ. ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
ಕೇರಳ ಮಂಗಲ್ಪಾಡಿ ನಿವಾಸಿ ಅಬ್ದುಲ್ ಹಾಪೀಲ್ (25), ಕುಳೂರು ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30), ಬಜಾಲ್ ೈಸಲ್‌ನಗರ ನಿವಾಸಿ ಅಲ್ತ್ಾ (28) ಬಂಧಿತ ಆರೋಪಿಗಳು.
ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಅ.8ರಂದು ರಾತ್ರಿ 10 ಗಂಟೆಗೆ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1.796.96 ಕಿ.ಗ್ರಾಂ ಎಂಡಿಎಂಎ ಹಾಗೂ 3 ಮೊಬೈಲ್ ೆನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವೀಪ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಪಾಯರ್ ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 1,63,84,000ರೂ. ಆಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿ ಜಿಯಾವುಲ್ ಹಕ್ ಎಂಬಾತನ ವಿರುದ್ದ ದುಬೈ ದೇಶದ ರಸ್-ಅಲ್- ಖೈಮಾ ಎಂಬಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 3 ವರ್ಷಗಳ ಕಾಲ ಲೈಲು ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಬಂದಿದ್ದ. ಇಲ್ಲೂ ಅದೇ ಕೃತ್ಯ ಮುಂದುವರಿಸಿದ್ದಾನೆ. ಆರೋಪಿ ಅಬ್ದುಲ್ ಹಾಪೀಲ್ ಎಂಬಾತನ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಪ್ರಕರಣ ದಾಖಲಾಗಿದೆ. ಆರೋಪಿ ಅಲ್ತ್ಾ ಎಂಬಾತನ ವಿರುದ್ದ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಪಂಜಾಬ್ ರಾಜ್ಯದ ಅಮತಸರದಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿೈಯರ್ ನ ನೀರು ಸಂಗ್ರಹವಾಗುವ ಸ್ಥಳದಲ್ಲಿ ಭದ್ರವಾಗಿ ಒಳಗೆ ಇರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ ನಂತರ ಈ ಮಾದಕವಸ್ತುವನ್ನು ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಪ್ರಾರಂಭದಲ್ಲಿಯೇ ಜಾಲವನ್ನು ಪತ್ತೆಹಚ್ಚುವಲ್ಲಿ ಮತ್ತು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ರಿ ಮೂರು ಜನ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.