ಹರ್ಷದ್ 
ದಕ್ಷಿಣ ಕನ್ನಡ

ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರ ಸಾವು MITTUR

ನಿಶಾಂತ ಎನ್ ಬಿಲ್ಲಂಪದವು
ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಕಾರು ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರವಾಹನ ಸವಾರ, ಮುರ ನಿವಾಸಿ ಹರ್ಷದ್ ಮೃತಪಟ್ಟಿದ್ದಾರೆ.
ಮಾಣಿ ಕಡೆಯಿಂದ ಪುತ್ತೂರಿಗೆ ಹೋಗುತ್ತಿದ್ದ ಕಾರು ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬಂದ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ದ್ವಿಚಕ್ರವಾಹನ ಸಂಪೂರ್ಣ ಜಖಂಗೊಂಡಿದೆ. ಗಂಭೀರ ಗಾಯಗೊಂಡಿದ್ದ ಸವಾರ ಹರ್ಷದ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯಿಂದ ಕೆಲ ಕಾಲ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದು, ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.