ಡಾ.ಅರುಣ ಶ್ಯಾಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  
ದಕ್ಷಿಣ ಕನ್ನಡ

ಮಾ.30-ಏ.6 ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ

ಮಂಗಳೂರು: ಈಶ್ವರನ ಹೂದೋಟ ಎಂದೇ ಬಣ್ಣಿಸಲಾಗುವ ಪ್ರಾಕೃತಿನ ಸೊಬಗಿನ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯುವುದು ವಿಶೇಷ. ಗಂಗೆ, ಯಮುನೆ, ಸರಸ್ವತಿ, ನರ್ಮದೆ, ಗಂಡಕೀ, ನಾರಾಯಣಿ, ತ್ರಿಶೂಲಿ, ಸರಯೂ, ಕಾವೇರಿ, ತುಂಗೆ, ನೇತ್ರಾವತಿ ಸೇರಿದಂತೆ ಇತರ ಪವಿತ್ರ ನದಿಗಳ (ಏಕದಶಾಹ) ತೀರ್ಥದ ಭವ್ಯ ಮೆರವಣಿಗೆ ಸಂಗಮ ಕ್ಷೇತ್ರ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದಿಂದ ಮಾ.30ರಂದು ಚಾಲನೆಗೊಳ್ಳಲಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆದು, ಹೊರೆಕಾಣಿಕೆಗಳ ಸಹಿತ ನಾಡಿನ ಸಾಧು, ಸಂತರ ನೇತತ್ವದಲ್ಲಿ ಶ್ರೀ ಕ್ಷೇತ್ರ ಪದ್ಯಾಣ ತಲುಪಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಅರುಣ ಶ್ಯಾಮ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾ.30ರಂದು ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಂಜೆ 3.30ರಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ, ಮಾ.31ರಂದು ಚಂಡಿಕಾಯಾಗ, ಏ.3ರಂದು ಪುನರ್ ಪ್ರತಿಷ್ಠೆ, ಅಷ್ಟಬಂಧ ಪ್ರತಿಷ್ಠೆ, ಏ.5ರಂದು ಶ್ರೀ ಶಿವಪಂಚಾಕ್ಷರಿ ಹಾಗೂ ಶ್ರೀಶಕ್ತಿ ಪಂಚಾಕ್ಷರಿ ಹವನ, ಏ.6ರಂದು ಶತರುದ್ರ ಸಹಿತ ಬ್ರಹ್ಮಕುಂಭಾಭಿಷೇಕ, ಏ.7ರಂದು ಶ್ರೀ ಧೂಮಾವತಿ ಹಾಗೂ ಕೊರತಿ ದೈವಗಳ ನೇಮ ನಡೆಯಲಿದೆ. ಬ್ರಹ್ಮಕಲಶೋತ್ಸವದಲ್ಲಿ ಮಹಾಲಿಂಗೇಶ್ವರನಿಗೆ ಪ್ರಿಯವಾದ ಭಜನೆ, ಭಕ್ತಿ ಸಂಗೀತ, ಯಕ್ಷಗಾನ, ಸುಧರ್ಮ ಸಭೆ ಮೇಳೈಸಲಿದೆ. ಏ.7ರಂದು ಕಾರ್ಯಕರ್ತರ ಸಭೆ ನಡೆಯಲಿದ್ದು, ಏ.20ರಂದು ದೃಢಕಲಶ ಕಾರ್ಯಕ್ರಮಗಳು ನಡೆಯಲಿವೆ ಎಂದರು.
* ಸಂತರು, ಗಣ್ಯರ ಆಗಮನ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಮತ್ತು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಮೈಸೂರು ಸಂಸ್ಥಾನ ಮಹಾರಾಜ ಯದುವೀರ ಕಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೊದಲಾದವರು ಭಾಗವಹಿಸುವರು ಎಂದು ಅರುಣ ಶ್ಯಾಮ್ ತಿಳಿಸಿದರು.
ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕಷ್ಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ಕಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಸಾಂಸ್ಕ್ತ್ರತಿಕ ಸಮಿತಿ ಸಂಚಾಲಕಿ ಪ್ರಣತಿ ಪದ್ಯಾಣ, ವಿವಿಧ ಸಮಿತಿಗಳ ಪ್ರಮುಖರಾದ ವಿನೋದ್ ಶೆಟ್ಟಿ ಪಟ್ಲ, ಚೈತನ್ಯ ಪದ್ಯಾಣ, ಮಾಧ್ಯಮ ಸಮಿತಿ ಸಂಚಾಲಕ ಹರೀಶ್ ಮಾಂಬಾಡಿ ಉಪಸ್ಥಿತರಿದ್ದರು.