ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಾಲೂಕಿಗೆ ಆಗಮಿಸಿದ್ದ ಅವರು ಪೂರ್ವಭಾವಿಯಾಗಿ ಸಂಕಷ್ಟ ಚತುರ್ಥಿ ದಿನದಂದು ಗಣಪತಿಯ ದರ್ಶನ ಪಡೆದು ಪ್ರಾರ್ಥಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾಪಂ ಮಾಜಿ ಸದಸ್ಯ ಕೊರಗಪ್ಪ ಗೌಡ, ಕೊಕ್ಕಡ ಗ್ರಾಪಂ ಮಾಜಿ ಸದಸ್ಯ ಯೋಗೀಶ್ ಗೌಡ, ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.