ಸುದ್ದಿಗೋಷ್ಠಿಯಲ್ಲಿ ಡಾ.ಎಂ.ಮೋಹನ ಆಳ್ವ ಡಾ.ಇಫ್ತೀಕರ್ ಆಲಿ,ಡಾ. ಶಿವಶರಣ, ಸೆನೆಟ್ ಸದಸ್ಯೆ ಡಾ.ವೈಶಾಲಿ ಶ್ರೀಜಿತ್, ಉಪ ಕುಲಪತಿ ಡಾ.ಬಿ.ವಸಂತ ಶೆಟ್ಟಿ ಉಪಸ್ಥಿತರಿದ್ದರು.  
ದಕ್ಷಿಣ ಕನ್ನಡ

ಜ.12-16 ಆಳ್ವಾಸ್‌ನಲ್ಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ

ಮಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 85ನೇ ಅಖಿಲ ಭಾರತ ಪುರುಷ ಹಾಗೂ ಮಹಿಳೆಯರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ್ನು ಜ.12 ರಿಂದ 16ರವರೆಗೆ ಆಯೋಜಿಸಲಾಗಿದೆ.
ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4288 ಅಥ್ಲೀಟ್‌ಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.12 ರಂದು ಸಂಜೆ 4.30ಕ್ಕೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಿ, ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ ಮಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಉಮಾನಾಥ ಎ ಕೋಟ್ಯಾನ್,ಡಾ. ನಿವಾಸ ಎನ್‌ಟಿ,ಎಚ್‌ಸಿ ಬಾಲಕೃಷ್ಣ, ರಿಜ್ವಾನ್ ಅರ್ಷದ್, ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ.ಇಫ್ತೀಕರ್ ಆಲಿ,ಡಾ. ಶಿವಶರಣ, ಸೆನೆಟ್ ಸದಸ್ಯೆ ಡಾ.ವೈಶಾಲಿ ಶ್ರೀಜಿತ್, ಉಪ ಕುಲಪತಿ ಡಾ.ಬಿ.ವಸಂತ ಶೆಟ್ಟಿ ಉಪಸ್ಥಿತರಿದ್ದರು.