ರಾಷ್ಟ್ರಮಟ್ಟದ ನೆಟ್‌ಬಾಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಕ್ರೀಡಾಪಟುಗಳನ್ನು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೌರವಿಸಲಾಯಿತು. ಪ್ರಮುಖರಾದ ಲೀಲಾ ಮನಮೋಹನ್, ಸೋಮಶೇಖರ ನಾಯಕ್, ರಾಜೇಶ್ ಎನ್.ಎಸ್., ಪವನ್ ಎಂ.ಡಿ. ಮತ್ತಿತರರು ಉಪಸ್ಥಿತರಿದ್ದರು.
ಎಸ್.ಎಸ್.ಪಿ.ಯು ಕಾಲೇಜಿನ ಆಡಳಿತ ಮಂಡಳಿ, ಹಳೇ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದವರು ತಂಡವನ್ನು ಸ್ವಾಗತಿಸಿದರು. ಬಳಿಕ ತಪಸ್ಯಾ ಹಾಗೂ ತಂಡವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಮುಂಭಾಗದಲ್ಲಿ ಗೌರವಿಸಲಾಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಿಂದ ತೆರೆದ ವಾಹನದಲ್ಲಿ ಎಸ್.ಎಸ್.ಪಿ.ಯು ಕಾಲೇಜಿನ ತನಕ ಮೆರವಣಿಗೆ ಸಾಗಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೀಲಾ ಮನಮೋಹನ್ ಮೆರವಣಿಗೆ ಉದ್ಘಾಟಿಸಿದರು. ಮಾಸ್ಟರ್ ಪ್ಲಾೃನ್ ಸಮಿತಿ ಸದಸ್ಯ ಪವನ್ ಎಂ.ಡಿ., ಪ್ರಾಚಾರ್ಯ ಸೋಮಶೇಖರ ನಾಯಕ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್., ಉಪಾಧ್ಯಕ್ಷರಾದ ಲೋಕೇಶ್ ಬಿ.ಎನ್., ದೀಪಕ್ ನಂಬಿಯಾರ್, ಕಾರ್ಯದರ್ಶಿ ರತ್ನಾಕರ ಎಸ್., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಉಪಾಧ್ಯಕ್ಷ ಗುಣವರ್ಧನ ಕೆದಿಲ, ಪ್ರಮುಖರಾದ ಪ್ರೇಮನಾಥ ಶೆಟ್ಟಿ, ನವೀನ್ ಹೆಗ್ಡೆ, ತುಷಾರ್ ಮತ್ತಿತರರು ಉಪಸ್ಥಿತರಿದ್ದರು.