ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ಮಾ. 20 ಮತ್ತು 21ರಂದು ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. 
ದಕ್ಷಿಣ ಕನ್ನಡ

ಮಾ. 20 ಮತ್ತು 21ರಂದು ಆಳ್ವಾಸ್‌ನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ಮಾ. 20 ಮತ್ತು 21ರಂದು ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.
ಈ ವಿಚಾರ ಸಂಕಿರಣ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಮೂಡುಬಿದಿರೆಯ ಆಳ್ವಾಸ್ ಕಾಲೇಜು (ಸ್ವಾಯತ್ತ) ಕನ್ನಡ ವಿಭಾಗ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಸಹಯೋಗದಲ್ಲಿ ನಡೆಯಲಿದೆ.
ದಕ್ಷಿಣ ಭಾರತದ ಭಾಷೆಗಳು ಮತ್ತು ಸಂಸ್ಕೃತಿಗಳು ಬದಲಾಗುತ್ತಿರುವ ಸ್ಥಿತಿಗತಿಗಳನ್ನು ಚರ್ಚಿಸುವುದರ ಜೊತೆಗೆ, ಈ ಪ್ರದೇಶದಲ್ಲಿ ಭಾಷಾ ವೈವಿಧ್ಯತೆಯ ಮಹತ್ವವನ್ನು ಉಲ್ಲೇಖಿಸುವುದು ವಿಚಾರ ಸಂಕಿರಣದ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಭಾರತದಲ್ಲಿ ಬಹುಭಾಷಾ ಪರಂಪರೆ ದೀರ್ಘಕಾಲದಿಂದಲೂ ಇದ್ದರೂ, ಆಡಳಿತಾತ್ಮಕ ಮತ್ತು ರಾಜಕೀಯ ಒತ್ತಡಗಳ ಪರಿಣಾಮವಾಗಿ ಹಲವಾರು ಪ್ರಾದೇಶಿಕ ಭಾಷೆಯ ಹೆಗ್ಗುರುತುಗಳು ಅಂಚಿಗೆ ಸರಿದಿರುವುದರ ಬಗೆಗೆ ಬೆಳಕು ಚೆಲ್ಲಲಿದೆ.
ಭಾಷೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಸಂಬಂಧಿತ ವಿಷಯಗಳ ಕುರಿತು ವಿದ್ವಾಂಸರು ಮತ್ತು ಸಂಶೋಧಕರು ಚರ್ಚೆ ನಡೆಸಲು ಈ ವಿಚಾರ ಸಂಕಿರಣ ವೇದಿಕೆ ಒದಗಿಸಲಿದೆ.
ಮಾ.20ರಂದು ಬೆಳಗ್ಗೆ 11ಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ವಿಚಾರ ಸಂಕಿರಣ ಉದ್ಘಾಟಿಸುವರು. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಆಳ್ವಾಸ್ ಎಜುಕೇಶನ್ ೌಂಡೇಶನ್ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೊ. ಮಾಧವ ಪೆರಾಜೆ, ಆಳ್ವಾಸ್ ಕಾಲೇಜು ಪ್ರಾಂಶುಪಾಲ ಡಾ. ಕುರಿಯನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಭಾಗವಹಿಸಲಿದ್ದಾರೆ. ಮಾ.21ರಂದು ಮಧ್ಯಾಹ್ನ 3ಕ್ಕೆ ಸಮಾರೋಪ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.