ಬೆಳ್ತಂಗಡಿ: ಹ್ಯಾಕಥಾನ್ ಹಾಗೂ ನವೋದ್ಯಮ ಆಧಾರಿತ ಕಾರ್ಯಕ್ರಮ ಇಂದಿನ ಶಿಕ್ಷಣ ಸಂಸ್ಥೆಗಳಿಗೆ ಅತ್ಯಂತ ಅಗತ್ಯವಾಗಿವೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆ ಪರಿಹಾರ ಕೌಶಲ ಹಾಗೂ ವಿನೂತನ ಚಿಂತನೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ.ಎಸ್.ಎನ್.ಕಾಕತ್ಕರ್ ಹೇಳಿದರು.
ಉಜಿರೆ ಎಸ್‌ಡಿಎಂ ಐಟಿ ನವೋದ್ಯಮ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಘಟಕ, ಐಕ್ಯುಎಸಿ, ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಡಿಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಅಂತಿಮ ಹಾಗೂ ಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 16 ಗಂಟೆಗಳ ಹ್ಯಾಕಥಾನ್ ಇನ್ನೋವೇಟ್-ಎ-ಥಾನ್ 2026 ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಂದು ಹೊಸ ಆಲೋಚನೆ ಮತ್ತು ಸೃಜನಶೀಲತೆ ಉತ್ತಮ ಉತ್ಪನ್ನವಾಗಿ ರೂಪುಗೊಳ್ಳುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ ಆಲೋಚನೆ ಇದ್ದರೆ ಸಾಕಾಗುವುದಿಲ್ಲ, ಅದನ್ನು ಕಾರ್ಯರೂಪಕ್ಕೆ ತರಲು ತಾಂತ್ರಿಕ ಜ್ಞಾನ, ಯೋಜನೆ ಹಾಗೂ ನಿರಂತರ ಪರಿಶ್ರಮ ಅಗತ್ಯ ಎಂದರು.
ಎಸ್‌ಡಿಎಂ ಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಸಂದೀಪ್ ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿ, ನವೀನ ಕಲ್ಪನೆಗಳು, ತಾಂತ್ರಿಕ ಪ್ರಾವೀಣ್ಯತೆ ಹಾಗೂ ಸಮಾಜಮುಖಿ ದೃಷ್ಟಿಕೋನದ ಆಧಾರದ ಮೇಲೆ ಅತ್ಯುತ್ತಮ ಯೋಜನೆಗಳನ್ನು ಆಯ್ಕೆ ಮಾಡಲಾಗುವುದು ಎಂದರು.
ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿನಯ್ ಎಂ.ಆರ್., ರಾಮಪ್ರಸಾದ್ ಡಿ.ಎಸ್. ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿಗಳಾದ ಅನನ್ಯಾ ಕೆ.ರಾಜ್ ಹಾಗೂ ಪಂಚಮಿ ನಿರೂಪಿಸಿದರು. ತ್ರಿಪದಾ ವಂದಿಸಿದರು.
ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಜ್ಞಾನ ಸಾಕಾಗುವುದಿಲ್ಲ. ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ಕಂಡುಹಿಡಿಯುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು.ಅನಿಲ್ ಕುಮಾರ್ ಎಚ್.ಎಂ. ಬೆಂಗಳೂರಿನ ಆಟೋಡೆಸ್ಕ್ ಸಂಸ್ಥೆಯ ಹಿರಿಯ ಉತ್ಪನ್ನ ಭದ್ರತಾ ಅಭಿಯಂತ