ಒಡಿಯೂರಿನ ರಾಜಾಂಗಣದಲ್ಲಿ ಶ್ರೀ ಗುರುದೇವ ವಿದ್ಯಾಪೀಠದ ೮೦ನೇ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಮುಖರಾದ ಸಾದ್ವಿ ಮಾತಾನಂದಮಯಿ, ಸೇರಾಜೆ ಗಣಪತಿ ಭಟ್, ರೇಣುಕಾ ಎಸ್.ರೈ ಮೊದಲಾದವರಿದ್ದರು.
- ಶ್ರೀ ಗುರುದೇವಾನಂದ ಸ್ವಾಮೀಜಿ ಶುಭನುಡಿ
ವಿಟ್ಲ: ಯುವ ಜನಾಂಗ ಸಶಕ್ತ ಭಾರತವನ್ನು ಕಟ್ಟುವ ಕೆಲಸವನ್ನು ಮಾಡಬೇಕು. ದೇಶವನ್ನು ರಕ್ಷಣೆ ಮಾಡುವ ಸಮರ್ಥ ನಾಯಕರನ್ನು ಹೊಂದಿದ್ದೇವೆ. ಹಲವಾರು ಯೋಧರ ತ್ಯಾಗ ಬಲಿದಾನಗಳನ್ನು ನೆನಪಿಸಿ, ಸ್ವಾತಂತ್ರ್ಯ ವನ್ನು ಉಳಿಸಿಕೊಂಡು ಮುಂದೆ ದೇಶದ ರಕ್ಷಣೆಗಾಗಿ ಸೈನಿಕರಾಗಿ ದೇಶ ರಕ್ಷಣೆಯತ್ತ ಒಲವು ತರಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಒಡಿಯೂರಿನ ರಾಜಾಂಗಣದಲ್ಲಿ ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಸಾದ್ವಿ ಮಾತಾನಂದಮಯಿ ದಿವ್ಯ ಸಾನಿಧ್ಯ ವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು. ಶಾಲಾ ಸಂಚಾಲಕ ಸೇರಾಜೆ ಗಣಪತಿ ಭಟ್, ಮುಖ್ಯ ಶಿಕ್ಷಕಿ ರೇಣುಕಾ ಎಸ್.ರೈ, ಶಿಕ್ಷಕಿ ಅರುಣಾ, ಶಿಕ್ಷಕರಾದ ಶೇಖರ ಶೆಟ್ಟಿ ಬಾಯಾರ್ ಉಪಸ್ಥಿತರಿದ್ದರು.