pdo ವಿಲ್ಫ್ರೆಡ್ ಲಾರೆನ್ಸ್ ರೊಡಿಗ್ರಸ್
ದಕ್ಷಿಣ ಕನ್ನಡ

ಆರ್ಯಾಪು ಪಿಡಿಒ ಅಮಾನತು PUTTUR

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆೆಡ್ ಲಾರೆನ್ಸ್ ರೊಡಿಗ್ರಸ್ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ರೊಡಿಗ್ರಸ್ ಈ ಹಿಂದೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಲೋಕಾಯುಕ್ತ ಅಧಿಕಾರಿಗಳು ಪಂಚಾಯಿತಿಗೆ ಕಡತಗಳ ಪರಿಶೀಲನೆಗೆ ಆಗಮಿಸಿದಾಗ ಸಾರ್ವಜನಿಕರು ಹಲವು ವಿಚಾರದಲ್ಲಿ ದೂರು ನೀಡಿ ಪಿಡಿಒ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಪಿಡಿಒ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೆ ಅಮಾನತು ಅವಧಿಯಲ್ಲಿ ಕೇಂದ್ರಸ್ಥಾನವನ್ನು ತೊರೆಯುವಂತಿಲ್ಲ ಎಂದು ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.