ಸಚಿವ ಯು.ಟಿ.ಖಾದರ್ ಪ್ರಜಾಸೇವೆ ಆಂದೋಲನಾ ಸಭೆ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ.ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ಕಾರ್ಬಾರಿ ಇನ್ನಿತರರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಸಮಸ್ಯೆ ನಿವಾರಣೆ ಪ್ರಜಾಸೇವೆ ಉದ್ದೇಶ

ಜಿಲ್ಲಾಮಟ್ಟದ ಸಭೆ

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಕಾನೂನು ಬದಲಾವಣೆ ಮಾಡಲು ಜನಸಾಮಾನ್ಯರ ಸಹಕಾರವೂ ಅಗತ್ಯ. ಈ ಬಗ್ಗೆ ಸಲಹೆಗಳನ್ನು ಆಧರಿಸಿ ಮುಂದಿನ ದಿನಗಳಲ್ಲಿ ಕಾನೂನಿನಲ್ಲಿ ಅಗತ್ಯ ಬದಲಾವಣೆ ಅಥವಾ ತಿದ್ದುಪಡಿ ತರಲು ಸರ್ಕಾರ ಬದ್ಧವಾಗಿದೆ. ಎಲ್ಲೂ ಈಡೇರಲು ಸಾಧ್ಯವಿಲ್ಲ ಎನ್ನುವ ಕೆಲಸದ ಬಗ್ಗೆ ಸ್ಪಷ್ಟನೆ ನೀಡುವ ಜತೆ ಸಾಧ್ಯವಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದು ಪ್ರಜಾಸೇವೆಯ ಮುಖ್ಯ ಉದ್ದೇಶ. ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ಶನಿವಾರ ಜಿಲ್ಲಾಮಟ್ಟದ ಪ್ರಜಾಸೇವೆ ಆಂದೋಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕುಮಾರ್, ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಅರಣ್ಯಾಧಿಕಾರಿ ರವಿಶಂಕರ್, ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಜಿಲ್ಲಾ ಉಪಾಧ್ಯಕ್ಷ ಸುರೇಖಾ ಚಂದ್ರಹಾಸ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಉಪಸ್ಥಿತರಿದ್ದರು.

ಸಹಾಯಕ ಆಯುಕ್ತೆ ಮೀನಾಕ್ಷಿ ಆರ್ಯ ಸ್ವಾಗತಿಸಿದರು. ಜಿಲ್ಲಾಧಿಕಾರಿ ಡಾ.ದರ್ಶನ್ ಎಚ್.ವಿ.ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಮಂಜುಳಾ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ವಂದಿಸಿದರು.

ಮನೆ ನಿರ್ಮಾಣ ಸಂದರ್ಭ ಕಾನೂನು ಉಲ್ಲಂಘಿಸಿದರೆ ವಿದ್ಯುತ್ ಸಂಪರ್ಕ ನೀಡಬಾರದೆನ್ನುವ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ಬಡ, ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಪ್ರಥಮ ಬಾರಿಗೆ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂ ಕೋರ್ಟ್ ವಿರುದ್ಧವೇ ತೀರ್ಮಾನ ಕೈಗೊಂಡು 2500 ಚ.ಅ.ಯ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ತೀರ್ಮಾನಿಸಿದೆ.
ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ