ಅಂಬ್ಲಮೊಗರು ಗ್ರಾಮ ಪಂಚಾಯಿತಿಗೆ ಬುಧವಾರ ಸ್ಥಳೀಯರು ಮುತ್ತಿಗೆ ಹಾಕಿದರು. ಗ್ರಾಮಸ್ಥರಾದ ಅನಿಲ್ ತಿಲಕ್ ನಗರ, ಅಝರ್, ಖಲೀಲ್, ಅಶ್ಫಾಕ್, ಸತೀಶ್, ಬಾಬು ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಕುಡಿಯುವ ನೀರಿಗಾಗಿ ಗ್ರಾಪಂಗೆ ಮುತ್ತಿಗೆ

Santhosh Krishna K M

ಪ್ರಮುಖ ಮುಖ್ಯಾಂಶಗಳು

  • ಕುಡಿಯಲು ನೀರಿಲ್ಲದೆ ಸಂಕಷ್ಟ
  • ಹಲವು ಬಾರಿ ಮನವಿ ಮಾಡಿದರೂ ಗ್ರಾಪಂ ಅಧಿಕಾರಿಗಳು ಸಮಸ್ಯೆ ಬಗೆಹರಿಸಿಲ್ಲ
ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಲಕ್ ನಗರ ಪ್ರದೇಶದಲ್ಲಿ ಮೂರು ತಿಂಗಳಿನಿಂದ ಕುಡಿಯಲು ನೀರಿಲ್ಲದೆ ಸಂಕಷ್ಟ ಎದುರಾಗಿದ್ದರೂ ನಿರ್ಲಕ್ಷ್ಯ ತಾಳಲಾಗಿದೆ ಎಂದು ಆರೋಪಿಸಿ ಬುಧವಾರ ಸ್ಥಳೀಯರು ಗ್ರಾಪಂಗೆ ಮುತ್ತಿಗೆ ಹಾಕಿದರು.
ನೀರಿನ ಸಮಸ್ಯೆ ಬಗ್ಗೆ ಸ್ಥಳೀಯರು ಹಲವು ಬಾರಿ ಮನವಿ ಮಾಡಿದರೂ ಗ್ರಾಪಂ ಅಧಿಕಾರಿಗಳು ಸಮಸ್ಯೆ ಬಗೆಹರಿಸಿಲ್ಲ. ನೀರಿನ ಶುಲ್ಕ 100 ರೂ.ನಿಂದ 150ಕ್ಕೇರಿಸಲಾಗಿದ್ದೂ ನೀರು ಪೂರೈಕೆ ಆಗುತ್ತಿಲ್ಲ ಎಂದು ತಿಲಕ್ ನಗರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಬಿಟ್ಟು ಕದಲುವುದಿಲ್ಲ ಎಂದು ಪಟ್ಟುಹಿಡಿದರು.
ಪ್ರತಿಭಟನೆಗೆ ಮಣಿದ ಪಿಒಡಿ ಹೊಸ ಕೊಳವೆ ಬಾವಿ ಆಗುವವರೆಗೆ ಎರಡು ದಿನಕ್ಕೊಮ್ಮೆ ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡುವುದಾಗಿ ಲಿಖಿತ ಭರವಸೆ ನೀಡಿದರು. ಭರವಸೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದರು.
ಗ್ರಾಮಸ್ಥರಾದ ಅನಿಲ್ ತಿಲಕ್ ನಗರ, ಅಝರ್, ಖಲೀಲ್, ಅಶ್ಫಾಕ್, ಸತೀಶ್, ಬಾಬು, ಧನಲಕ್ಷಿ, ಐಸಮ್ಮ, ರುಕಿಯ, ಗೀತಾ, ಸುರೇಖ, ಕಾರ್ಮಿಕ ಮುಖಂಡರಾದ ಇಬ್ರಾಹಿಂ ಮದಕ, ರಫೀಕ್ ಹರೇಕಳ, ರಿಝ್ವನ್ ಹರೇಕಳ ಇನ್ನಿತರರು ಉಪಸ್ಥಿತರಿದ್ದರು.