ಮೂಲ್ಕಿಯಲ್ಲಿ ಮಹಾತ್ಮ ಗಾಂಧಿ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ಸಮಾರೋಪದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಇದ್ದರು.
ಮೂಲ್ಕಿ: ಗ್ರಾಮೀಣ ಜನರ ಬದುಕಿಗಾಗಿ ಹಮ್ಮಿಕೊಂಡ ಮಹಾತ್ಮ ಗಾಂಧಿ ಹೆಸರಿನ ಉದ್ಯೋಗ ಖಾತ್ರಿ ಕಾಯ್ದೆ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಜನಜಾಗೃತಿ ಮೂಡಿಸುವುದೇ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ಉದ್ದೇಶವಾಗಿದ್ದು, ಮನರೇಗಾ ಯೋಜನೆ ಮರು ಜಾರಿಗೊಳಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.
ಮೂಲ್ಕಿ ಬಸ್ ನಿಲ್ದಾಣದ ಬಳಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಬದಲಿಸಿರುವುದನ್ನು ಖಂಡಿಸಿ ಹಾಗೂ ಕಾಯ್ದೆ ಮರು ಜಾರಿಗೆ ಆಗ್ರಹಿಸಿ ಮಹಾತ್ಮ ಗಾಂಧಿ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ಸಮಾರೋಪ ಹಾಗೂ ಸಾರ್ವಜನಿಕ ಸಭೆಯಲ್ಲಿ ಗುರುವಾರ ಮಾತನಾಡಿದರು.
ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪರಿಸರ ಪ್ರವಾಸೋಧ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ನಾಯಕರಾದ ಪುತ್ತುಬಾವ, ಮಂಜುನಾಥ ಕಂಬಾರ, ಅಪ್ಪಿ, ಉಷಾ ಅಂಚನ್, ಸುಹಾನ್ ಆಳ್ವ, ಇಬ್ರಾಹಿಂ ನವಾಜ್, ಪ್ರವೀಣ್ ಶಿರ್ತಾಡಿ, ವಿಲ್ಮಾ ಡಿಕೋಸ್ಟ, ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ, ಸುಪ್ರೀತಾ ಶೆಟ್ಟಿ, ಪುರಂದರ ದೇವಾಡಿಗ, ರಕ್ಷಿತ್ ಪೂಜಾರಿ, ಅನೀಶ್, ಧನಂಜಯ ಮಟ್ಟು, ಮಯ್ಯದಿ, ಶಾಹುಲ್ ಹಮೀದ್, ಗೋಪಿನಾಥ ಪಡಂಗ, ಕೃಷ್ಣಪ್ಪ ಸುಳ್ಯ, ಭೀಮಾ ಶಂಕರ್, ಧರ್ಮಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು. ಪಾವಂಜೆಯಿಂದ ಮೂಲ್ಕಿವರೆಗೆ ವಿವಿಧ ಟ್ಯಾಬ್ಲೋಗಳೊಂದಿಗೆ ಪಾದಯಾತ್ರೆ ನಡೆಯಿತು.