ಕಡಬ ತಾಲೂಕಿನ ಹಳೆನೇರಂಕಿ ಸರ್ಕಾರಿ ಉನ್ನತ ಹಿ.ಪ್ರಾ. ಶಾಲೆ ಶತಮಾನೋತ್ಸವದ ಅಂಗವಾಗಿ ಪುಟಾಣಿ ಸಂಭ್ರಮ ಸಮಾರಂಭ ನಡೆಯಿತು. 
ದಕ್ಷಿಣ ಕನ್ನಡ

ಸರ್ಕಾರಿ ಶಾಲೆ ಯಾವತ್ತಿಗೂ ಶಾಶ್ವತ : ಶಶಿಧರ್ ಜಿ.ಎಸ್.

ಸೌಮ್ಯ ಆರ್
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್‌ಕುಮಾರ್ ನೆಲ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್‌ಕುಮಾರ್, ಕಡಬ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ ಶಾಂತರಾಮ ಓಡ್ಲ, ನಿವೃತ್ತ ಶಿಕ್ಷಕಿ ರಾಜೇಶ್ವರಿ ಪಿ. ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಜನಾರ್ದನ ಪೂಜಾರಿ ಕದ್ರ ಅಧ್ಯಕ್ಷತೆ ವಹಿಸಿದ್ದರು. ಕೆಎಸ್‌ಆರ್‌ಟಿಸಿ ಮಂಗಳೂರು ಘಟಕದ ನಿವೃತ್ತ ಸಂಚಾರ ನಿಯಂತ್ರಕ ವಿಶ್ವನಾಥ ರೈ ಎರಟಾಡಿ, ಶಿಕ್ಷಕ ಸಂದೇಶ್, ಮಯೂರ್ ಪಿ., ಎಂಆರ್‌ಪಿಎಲ್ ತೀರ್ಥರಾಜ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ರಮೇಶ ರೈ ರಾಮಮಜಲು, ಉಪಾಧ್ಯಕ್ಷ ಧರ್ಣಪ್ಪ ಗೌಡ ಅಲೆಪ್ಪಾಡಿ, ಎಸ್‌ಡಿಎಂಸಿ ಅಧ್ಯಕ್ಷ ವೀರೇಂದ್ರ ಪಾಲೆತ್ತಡ್ಡ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ವೈ.ಸಾಂತಪ್ಪ ಗೌಡ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಗೌಡ ವಂದಿಸಿದರು. ಸಹಶಿಕ್ಷಕರಾದ ದಯಾನಂದ ಓಡ್ಲ, ಗೀತಾಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಅಭಿವೃದ್ಧಿಗೆ ಸಹಕರಿಸಿದವರಿಗೆ ಸನ್ಮಾನಿಸಲಾಯಿತು.