ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗಣಪತಿ ಹವನಕ್ಕೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಪೂರ್ಣಾಹುತಿ ನೆರವೇರಿಸಿದರು. 
ದಕ್ಷಿಣ ಕನ್ನಡ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ PUTTUR

ಪುತ್ತೂರು: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ದೇವರಥ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜು, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ಕಾಲೇಜು ಸೇರಿದಂತೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗಣಪತಿ ಹವನ ನಡೆಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಪೂರ್ಣಾಹುತಿ ನೆರವೇರಿಸಿದರು. ಬಳಿಕ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ನೆರವೇರಿಸಲಾಯಿತು.

ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಟ್ರಸ್ಟಿ ಶ್ರೀಕೃಷ್ಣ ಎಸ್.ನಟ್ಟೋಜ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ., ಎಸ್ಟೇಟ್ ಮ್ಯಾನೇಜರ್ ರಾಜೇಂದ್ರ ಪ್ರಸಾದ್, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ವಸತಿಯುತ ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್., ಬಪ್ಪಳಿಗೆ ಅಂಬಿಕಾ ನೀಟ್, ಜೆಇಇ ಅಕಾಡೆಮಿ ಪ್ರಾಂಶುಪಾಲ ಕೇಶವ ಕಿಶೋರ್, ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಮತ್ತಿತರರು ಉಪಸ್ಥಿತರಿದ್ದರು.