ಪುತ್ತೂರು: ದೀಪಾವಳಿ ವಸ ವಿತರಣೆ ಕಾರ್ಯಕ್ರಮ ನವೆಂಬರ್ ೮ರಂದು ನಡೆಯಲಿದ್ದು, ಕಳೆದ ವರ್ಷ ಮಳೆಯಿಂದ ಸೃಷ್ಟಿಯಾದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರೀಡಾಂಗಣದಲ್ಲಿ ನೀರು ನಿಲ್ಲದಂತೆ ಈ ಬಾರಿ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದೇ ಗೊಂದಲಗಳಿಲ್ಲದೆ ಬೆಳಗ್ಗೆ ೯.೩೦ರಿಂದಲೇ ವಸ ವಿತರಣೆ ನಡೆಯಲಿದೆ. ಮೂರು ಕೌಂಟರ್‌ಗಳಲ್ಲಿ ಪ್ರತ್ಯೇಕವಾಗಿ ಬಟ್ಟಲು-ತಟ್ಟೆ, ಮಹಿಳೆಯರಿಗೆ ಗುಣಮಟ್ಟದ ಸೀರೆ, ಪುರುಷರಿಗೆ ಬೆಡ್ ಶೀಟ್‌ಗಳನ್ನು ವಿತರಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಸಂದರ್ಭದಲ್ಲಿ ನಡೆಯುವ ೧೪ನೇ ವರ್ಷದ ‘ಅಶೋಕ ಜನ-ಮನ’ ಕಾರ್ಯಕ್ರಮಕ್ಕೆ ಸೋಮವಾರ ಚಪ್ಪರ ಮುಹೂರ್ತ ನೆರವೇರಿಸಿ ಮಾತನಾಡಿದರು.
ಒಂದು ಮನೆಯಿಂದ ಎಷ್ಟು ಮಂದಿಯಾದರೂ ವಸ, ಬೆಡ್‌ಶೀಟ್‌ಗಳನ್ನು ಪಡೆಯಬಹು. ಆದರೆ ಒಬ್ಬರು ಒಮ್ಮೆ ಮಾತ್ರ ತೆಗೆದುಕೊಳ್ಳಬೇಕು. ಬೆಳಗ್ಗಿನಿಂದ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ, ೩ರ ಬಳಿಕ ದೋಸೆ ಮೇಳ ನಡೆಯಲಿದೆ. ಸಮಾರಂಭಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸುವ ಯೋಚನೆ ಇದ್ದು ಇನ್ನೂ ಅಂತಿಮಗೊಂಡಿಲ್ಲ. ರಾಜ್ಯದ ವಿವಿಧ ಸಚಿವರು, ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಸುಮಾ ಅಶೋಕ್ ರೈ, ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಳಿನಿ ಪಿ.ಶೆಟ್ಟಿ, ಪುಡಾ ಸದಸ್ಯ ನಿಹಾಲ್ ಪಿ.ಶೆಟ್ಟಿ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜೋಕಿಂ ಡಿಸೋಜ, ಪುತ್ತೂರು ಅಧ್ಯಕ್ಷ ಉಮಾನಾಥ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿಯ ಮಹಮ್ಮದ್ ಬಡಗನ್ನೂರು, ಕೃಷ್ಣಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತಿತರರು ಉಪಸ್ಥಿತರಿದ್ದರು.