ದರ್ಬೆ ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ
- ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ
ಪುತ್ತೂರು: ದರ್ಬೆ ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣದಲ್ಲಿ ಕೊಲೆಯತ್ನ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಸುದರ್ಶನ್ ಪೈಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಅಂಗಡಿ ಮಾಲಕಿ ಅಂಜನಾ ಎಸ್.ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ.
ಸುಳ್ಯ ತಾಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ಸಾನ್(೩೨) ನೀಡಿದ ದೂರಿನಂತೆ ಅಂಗಡಿಯಲ್ಲಿದ್ದ ಅಂಜನಾ ಪೈ, ಸುದರ್ಶನ ಪೈ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುದರ್ಶನ ಪೈ ಅವರನ್ನು ಬಂಽಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಂಗಡಿ ಮಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಕರಣ ರದ್ದು ಅರ್ಜಿ ವಜಾ:
ಪ್ರಕರಣದಲ್ಲಿ ಅಂಗಡಿ ಮಾಲಕಿ ಹಾಗೂ ಆಕೆಯ ಪುತ್ರನ ಮೇಲೆ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಮಂಗಳವಾರ ನಡೆಯಿತು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿ, ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಎ-ಐಆರ್ ರದ್ದತಿಗೆ ನಿರಾಕರಿಸಿ, ಅರ್ಜಿ ವಜಾಗೊಳಿಸಿದ್ದಾರೆ.
ಅರ್ಜಿದಾರರ ಪರ ವಕೀಲರು, ಕಕ್ಷಿದಾರರ ಮೇಲೆ ಬಿಎನ್‌ಎಸ್ ಕಾಯ್ದೆ ೧೦೯ರಡಿ ಹತ್ಯೆಯತ್ನ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಜೀಪ್‌ಗೆ ನುಗ್ಗಿ ಹಲ್ಲೆ ನಡೆಸಿದವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರಕ್ರಿಯೆ ನೀಡಿದ ನ್ಯಾಯಮೂರ್ತಿಗಳು, ಅಗತ್ಯ ಬಿದ್ದಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುತ್ತಾರೆ. ದೂರನ್ನೇ ನೀಡದೆ ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತನಿಖೆ ನಡೆಸಿ ಸೂಕ್ತ ಸಾಕ್ಷಾಧಾರ ದೊರೆತಲ್ಲಿ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸುವಂತೆ ತನಿಖಾಽಕಾರಿಗೆ ನಿರ್ದೇಶನ ನೀಡಿದ ನ್ಯಾಯಾಲಯ ಅರ್ಜಿ ವಿಲೇ ಮಾಡಿದೆ. ಇದೇ ಪ್ರಕರಣಕ್ಕೆ ಸಂಬಂಽಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಬ್ಬಿದ ಪ್ರಕರಣದ ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.