ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆಯಲ್ಲಿ ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ, ಅಶೋಕ್ ಕುಮಾರ್ ರೈ, ಕಿಶೋರ್ ಕುಮಾರ್ ಬೊಟ್ಯಾಡಿ, ಸಂಜೀವ ಮಠಂದೂರು, ನಳಿನ್ ಕುಮಾರ್ ಇದ್ದರು.  
ದಕ್ಷಿಣ ಕನ್ನಡ

ಪುತ್ತೂರು ದಸರಾ ವೈಭವದ ಶೋಭಾಯಾತ್ರೆ PUTTUR

ಪುತ್ತೂರು: ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು.

ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಧ್ವಜಾರೋಹಣ ನೆರವೇರಿಸಿದರು. ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಪುಷ್ಪಾರ್ಚನೆ ಮಾಡಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ರಥಾರತಿ ನೆರವೇರಿಸಿದರು.

ಬೊಳುವಾರು ಜಂಕ್ಷನ್‌ನಿಂದ ದರ್ಬೆ ಸರ್ಕಲ್‌ವರೆಗೆ ಕಲಾತಂಡಗಳು ಸುಮಾರು ೫ ಕಡೆಗಳಲ್ಲಿ ಪ್ರದರ್ಶನ ನೀಡಿದವು. ಕುಣಿತ ಭಜನಾ ತಂಡ, ಪುಟ್ಟ ಶಾರದೆಯರು, ಹುಲಿ ಕುಣಿತದ ವಿವಿಧ ವೇಷಧಾರಿಗಳು ಮೆರವಣಿಗೆಗೆ ಮೆರುಗು ತಂದರು.

ಮಾಜಿ ಶಾಸಕ ಸಂಜೀವ ಮಠಂದೂರು, ಅಬುಧಾಬಿಯ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಪಾಲ್ಗೊಂಡಿದ್ದರು.