ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ತಹಸೀಲ್ದಾರ್ ಎಸ್.ಬಿ.ಕೂಡಲಗಿ, ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಬಿ., ತಾಪಂ ಇಒ ನವೀನ್ ಕುಮಾರ್ ಭಂಡಾರಿ ಇತರರು ಇದ್ದರು. 
ದಕ್ಷಿಣ ಕನ್ನಡ

ಸ್ವಚ್ಛ, ಸೌಹಾರ್ದ ಪುತ್ತೂರು ನಿರ್ಮಾಣಕ್ಕೆ ಕೊಡುಗೆ ಅಗತ್ಯ PUTTUR

ಸ್ಟೆಲ್ಲಾ ವರ್ಗೀಸ್ ಆಶಯ | ಮಹಾತ್ಮ ಗಾಂಧಿ ಜಯಂತಿ ಆಚರಣೆ

ಪುತ್ತೂರು: ಅಸ್ಪೃಶ್ಯತೆ ನಿವಾರಣೆ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ಸ್ವಚ್ಛತೆಗೆ ಮಹಾತ್ಮಾ ಗಾಂಧಿ ಅವರ ಕೊಡುಗೆ ಅಪಾರವಾದುದು. ಗಾಂಧೀಜಿ ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಚ್ಛ, ಶಾಂತಿ, ಸೌಹಾರ್ದ ಪುತ್ತೂರು ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಗಾಂಧಿ ಕಟ್ಟೆ ಸಮಿತಿ, ತುಳು ಕೂಟ ಮತ್ತು ತುಳು ಅಪ್ಪೆ ಕೂಟ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೀಪ ಪ್ರಜ್ವಲಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ನಡೆಸಲಾದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದರ್ಬೆ ಹಾಗೂ ಬೊಳುವಾರು ವೃತ್ತದಿಂದ ಹೊರಟ ಸ್ವಚ್ಛತಾ ಜಾಥಾ ಗಾಂಧಿ ಕಟ್ಟೆಯ ಬಳಿ ಸಮಾಪನಗೊಂಡಿತು.

ವಕೀಲ ದುರ್ಗಾಪ್ರಸಾದ್ ರೈ ಕುಂಬ್ರ, ತಹಸೀಲ್ದಾರ್ ಎಸ್.ಬಿ.ಕೂಡಲಗಿ, ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಬಿ., ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿ., ಪೌರಾಯುಕ್ತೆ ವಿದ್ಯಾ ಎಂ.ಕಾಳೆ ಮತ್ತಿತರರು ಉಪಸ್ಥಿತರಿದ್ದರು.

ಗಾಂಧಿ ಕಟ್ಟೆ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ತುಳು ಅಪ್ಪೆಕೂಟದ ಅಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ ವಂದಿಸಿದರು. ರಾಜೇಶ್ ಬಿಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.

ಗಾಂಧಿ ಪುತ್ಥಳಿ ಬಲಗೈಗೆ ಹಾನಿ!

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ೧೯೩೪ರಲ್ಲಿ ಪುತ್ತೂರಿಗೆ ಆಗಮಿಸಿದ್ದ ವೇಳೆ ಗಾಂಧೀಜಿ ಅವರು ಕುಳಿತ ಜಾಗವನ್ನು ಗಾಂಧಿ ಕಟ್ಟೆಯಾಗಿ ಅಭಿವೃದ್ಧಿ ಪಡಿಸಿ, ೧೯೯೦ರಲ್ಲಿ ಪ್ರತಿಮೆ ಸ್ಥಾಪಿಸಲಾಗಿತ್ತು. ಕೆಲವು ವರ್ಷಗಳ ಬಳಿಕ ಪ್ರತಿಮೆಯನ್ನು ನವೀಕರಣ ಮಾಡಲಾಗಿತ್ತು. ಆದರೆ ಈಗ ಈ ಬಗ್ಗೆ ಸಮರ್ಪಕ ಕಾಳಜಿ ವಹಿಸುತ್ತಿಲ್ಲ ಎಂಬುದಕ್ಕೆ ಪ್ರತಿಮೆಯ ಬಲ ಮೊಣಕೈ ಬಳಿ ಹಾನಿಯಾಗಿದೆ. ಗಾಂಧಿ ಜಯಂತಿ ದಿನದ ಸಂದರ್ಭದಲ್ಲೂ ದುರಸ್ತಿಗೆ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.