ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. 
ದಕ್ಷಿಣ ಕನ್ನಡ

ಗುಡಿಗಳ ತೆರವಿಗೆ ಸಾಮೂಹಿಕ ಪ್ರಾರ್ಥನೆ Puttur Temple

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ಸಭಾಭವನ, ಅಯ್ಯಪ್ಪಗುಡಿ, ನಾಗನಗುಡಿ ಹಾಗೂ ನವಗ್ರಹ ಗುಡಿಗಳ ತೆರವುಗೊಳಿಸುವ ಅಂಗವಾಗಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನೆರವೇರಿತು.
೧೦೮ಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಚಕ್ರಾಜ್ಞಪೂಜೆ, ದ್ವಾದಶಮೂರ್ತಿ ಆರಾಧನೆ, ಸುಹಾಸಿನಿ ಆರಾಧನೆ, ಸಾಯಂಕಾಲ ವನದುರ್ಗಾಹವನ, ಅಘೋರ ಹವನಗಳು ಸಂಪನ್ನಗೊಂಡವು. ಕ್ಷೇತ್ರದ ತಂತ್ರಿಗಳಾದ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಗಳು ನಡೆದವು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ನಳಿನಿ ಪಿ. ಶೆಟ್ಟಿ, ದಿನೇಶ್ ಪಿ.ವಿ ಕುಲಾಲ್, ಕೃಷ್ಣ ವೇಣಿ, ಮಹಾಬಲ ರೈ ವಳತ್ತಡ್ಕ, ಬಿ.ಈಶ್ವರ ನಾಯ್ಕ ಬೇಡೆಕರ್, ವಿನಯಕುಮಾರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.