ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನ್ಯಾಯಾಽಶ ಸದಾನಂದ ನಾಗಪ್ಪ ನಾಯ್ಕ ಉದ್ಘಾಟಿಸಿದರು. ರವಿಕುಮಾರ, ಸಂತೋಷ್ ಕುಮಾರ್ ಕೆ, ಚಂದ್ರಾವತಿ ಇದ್ದರು.
- ಸದಾನಂದ ನಾಗಪ್ಪ ನಾಯ್ಕ ಅಭಿಪ್ರಾಯ
- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಪುತ್ತೂರು: ಸಂವಿಧಾನವನ್ನು ಅರಿತುಕೊಳ್ಳುವುದರಿಂದ ಹಲವು ಹಕ್ಕುಗಳನ್ನು ಪಡೆದುಕೊಳ್ಳಬಹುದು. ಭಾರತದ ಕಾನೂನಿನ ಪ್ರತಿಯೊಂದು ವಿಚಾರವನ್ನು ಜಾರಿಗೆ ತರುವುದರಿಂದ ಶಿಸ್ತು ತರಲು ಸಾಧ್ಯ ಎಂದು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹೇಳಿದರು.
ಪುತ್ತೂರು ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರ ಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕು ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ತಾಲೂಕುಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ವಿಶೇಷ ಉಪನ್ಯಾಸವನ್ನು ಪ್ಯಾನಲ್ ವಕೀಲೆ ಚಂದ್ರಾವತಿ ಟಿ. ನಡೆಸಿದರು. ಉಪತಹಸೀಲ್ದಾರ್ ರವಿಕುಮಾರ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಕೆ., ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಜಲಜಾಕ್ಷಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಮಹಿಳಾ ಕಾಲೇಜು ಪ್ರಾಂಶುಪಾಲ ನಂದಕಿಶೋರ್ ಉಪಸ್ಥಿತರಿದ್ದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗೇಶ್ ಪಾಟಾಳಿ ಕೆ. ಸ್ವಾಗತಿಸಿದರು. ವಸತಿ ಶಾಲೆಯ ಪ್ರಾಂಶುಪಾಲ ಸತೀಶ್ ಕುಮಾರ್ ಪ್ರಸ್ತಾವನೆಗೈದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕವಿತಾ ಕೆ. ವಂದಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗೀತಾ ಕಾರ್ಯಕ್ರಮ ನಿರೂಪಿಸಿದರು.