ಕೊಂಬೆಟ್ಟು ಬಂಟರ ಭವನದಲ್ಲಿ ಪುತ್ತೂರು ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ-ಗುರುವಂದನಾ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು. ರಾಜೇಂದ್ರ ಭಟ್, ಉಮಾನಾಥ ಶೆಟ್ಟಿ ಪೆರ್ನೆ, ರಾಮಕೃಷ್ಣ ಮಲ್ಲಾರ ಮೊದಲಾದವರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಮಕ್ಕಳಿಗೆ ಶಿಕ್ಷಣ ದೊರೆತಾಗ ದೇಶ ಅಭಿವೃದ್ಧಿ PUTTUR

ಪ್ರಮುಖ ಮುಖ್ಯಾಂಶಗಳು

  • ಶಾಸಕ ಅಶೋಕ್ ಕುಮಾರ್ ರೈ ಪ್ರತಿಪಾದನೆ
ಪುತ್ತೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅಗತ್ಯವಿದ್ದು, ನಾಗರಿಕ ಸಮಾಜವನ್ನು ನಿರ್ಮಾಣ ಮಾಡುವ ಶಿಕ್ಷಕರಿಂದ ದೇಶದ ಅಭಿವೃದ್ಧಿ ಸಾಧ್ಯ. ಸರ್ಕಾರ ೩೬೦೦ ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ತೆರೆಯುತ್ತಿದೆ. ಪುತ್ತೂರಿನಲ್ಲಿಯೂ ೧೯ ಶಾಲೆಗಳನ್ನು ಗುರುತಿಸಲಾಗಿದೆ. ಬಸ್ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಗುರುಭವನಕ್ಕೆ ಸರ್ಕಾರದಿಂದ ೫ ಕೋಟಿ ರೂ. ಅನುದಾನ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಕೊಂಬೆಟ್ಟು ಬಂಟರ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ-ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಕಾರ್ಕಳ ಇನ್ನಾ ಎಂ.ವಿ.ಶಾಸ್ತ್ರಿ ಅನುದಾನಿತ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜೇಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಿದರು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಸಾಧಕರನ್ನು ಗೌರವಿಸಲಾಯಿತು. ಗುರುಭವನದ ನೀಲನಕಾಶೆ ಅನಾವರಣ ಮಾಡಲಾಯಿತು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ಯಾಮಲಾ, ದೈಹಿಕ ಶಿಕ್ಷಣ ಪರಿವೀಕ್ಷಣಾಽಕಾರಿ ಸಿಲ್ವಿಯಾ ಅಸುಂಪ್ತಾ ಕ್ಯಾಸ್ಟಲೀನಾ, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಪುತ್ತೂರು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್.ಎ., ಕಡಬ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತಾರಾಮ ಓಡ್ಲ ಮೊದಲಾದವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಽಕಾರಿ ಡಿ.ಸುರೇಶ್ ಸ್ವಾಗತಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀ-ನ್ ವೇಗಸ್ ವಂದಿಸಿದರು. ಸಿಆರ್‌ಪಿ ಗಣೇಶ್, ವಳಾಲು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿದರು.