ದಕ್ಷಿಣ ಕನ್ನಡ

ಮಹಾಲಿಂಗೇಶ್ವರ ದೇವಳ ಇಒ ಹುದ್ದೆಗೆ ಎರಡು ಆದೇಶ..! PUTTUR

ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸ * ಗೊಂದಲ ಮೂಡಿಸಿದ ಧಾರ್ಮಿಕ ದಕ್ತಿ ಇಲಾಖೆ ಉಪಆಯುಕ್ತರು, ಆಯುಕ್ತರ ಆದೇಶ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ವಿಚಾರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಉಪ ಆಯುಕ್ತರು ಹಾಗೂ ಆಯುಕ್ತರು ಹೊರಡಿಸಿದ ಎರಡು ಪ್ರತ್ಯೇಕ ಆದೇಶಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಧಾರ್ಮಿಕ ದತ್ತಿ ಇಲಾಖೆಯ ಉಪ ಆಯುಕ್ತರು ನ.೩ರಂದು ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅ?ಕಾರಿ ಹುದ್ದೆಯ ಪ್ರಭಾರ ಅಧಿಕಾರಿಯಾಗಿ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಆದೇಶಿಸಿದ್ದ ಪ್ರತಿ ಶುಕ್ರವಾರ ಬೆಳಗ್ಗೆ ವೈರಲ್ ಆಗಿತ್ತು.

ಕೆಲವೇ ಗಂಟೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ನ.೫ರಂದು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯನ್ನೇ ಹೆಚ್ಚುವರಿ ಪ್ರಭಾರದಲ್ಲಿರಿಸಿರುವ ಅಧಿಕೃತ ಜ್ಞಾಪನಾ ಪತ್ರವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಆದೇಶ ಹೊರಡಿಸಿದ್ದ ಪ್ರತಿ ಬಹಿರಂಗವಾಗಿದೆ.

ಈ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಕೆ.ವಿ.ಶ್ರೀನಿವಾಸ್ ಮುಂದುವರಿಯಲಿದ್ದಾರೆಂದು ಹೇಳಲಾಗಿದೆ. ಎರಡು ದಿನಗಳ ಅಂತರದಲ್ಲಿ ಎರಡು ರೀತಿಯ ಆದೇಶ ಹೊರಡಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.