ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ವಿಧಾನ ಪರಿಷತ್ ಸದಸ್ಯಡಾ ಸಿ.ಟಿ.ರವಿ ಉದ್ಘಾಟಿಸಿದರು. ಕೃಷ್ಣ ಶೆಟ್ಟಿ ಕಡಬ, ಡಾ.ಶ್ರೀಪತಿ ಕಲ್ಲೂರಾಯ, ಮುರಳಿಕೃಷ್ಣ ಕೆ.ಎನ್., ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಇದ್ದರು. 
ದಕ್ಷಿಣ ಕನ್ನಡ

ದೇಶದ ನಾಯಕತ್ವ ವಹಿಸುವ ಜೆನ್ ಜೀಗಳಾಗಿ PUTTUR

ನಿಶಾಂತ ಎನ್ ಬಿಲ್ಲಂಪದವು

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಡಾ.ಸಿ.ಟಿ ರವಿ ಕರೆ
  • ವಿವೇಕಾನಂದ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ
ಪುತ್ತೂರು: ವಿದ್ಯಾರ್ಥಿಜೀವನದಲ್ಲಿ ಸಿಗುವ ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು. ನಾವು ಮಾಡುವ ಸಾಧನೆಯಿಂದ ಇತರರಿಗೆ ಪ್ರೇರಣೆ ದೊರಕಿದಾಗ ಅದು ಸಾರ್ಥಕ ಸಾಧನೆ ಎಂದೆನಿಸಿಕೊಳ್ಳುತ್ತದೆ. ನಮ್ಮ ಜೀವನವು ಯಶಸ್ಸಿನೊಂದಿಗೆ ಸಾರ್ಥಕ್ಯ ಹೊಂದಬೇಕು. ದೇಶದ ಪ್ರಗತಿಯ ನೇತೃತ್ವ ವಹಿಸಿಕೊಳ್ಳುವ ಜೆನ್ ಜೀಗಳು ನೀವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯಡಾ.ಸಿ.ಟಿ.ರವಿ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಐಕ್ಯೂಎಸಿ ಸಹಯೋಗದಲ್ಲಿ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವೇಕಾನಂದ ವಿದ್ಯಾಸಂಸ್ಥೆಯು ಶಿಕ್ಷಣದ ಜತೆಗೆ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ರೂಪಿಸಿಕೊಂಡು ಬೆಳೆದಾಗ ಮಾತ್ರ ರಾಷ್ಟ್ರ ನಿರ್ಮಾಣ ಕಾರ್ಯ ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿ ಸಂಘದ ಪ್ರತಿನಿಽಗಳು, ತರಗತಿ ಪ್ರತಿನಿಽಗಳು ಪ್ರಮಾಣ ವಚನ ಸ್ವೀಕರಿಸಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್., ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಂ. ಇತರರು ಇದ್ದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಮ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೇಯಸ್ ಕೆ.ಆರ್. ವಂದಿಸಿದರು. ಅವನಿ ಕೆ. ಕಾರ್ಯಕ್ರಮ ನಿರೂಪಿಸಿದರು.