ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಟ್ರಸ್ಟ್ ಮುಖಾಂತರ ಈಗಾಗಲೇ ಕ್ಯಾನ್ಸರ್, ದಂತ ಚಿಕಿತ್ಸೆ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ವಿವಿಧ ವೈದ್ಯಕೀಯ ಸಂಸ್ಥೆಗಳ ತಜ್ಞ ವೈದ್ಯರಿಂದ ಗುಣಮಟ್ಟದ ತಪಾಸಣೆ ನಡೆಯುವುದರಿಂದ ಕಲ್ಲಮುಂಡ್ಕೂರಿನಂತಹ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಉಪಯುಕ್ತವಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಹೇಳಿದರು.
ಮೂಡುಬಿದಿರೆ ಅಮರನಾಥ ಶೆಟ್ಟಿ ಚಾರಿಟೆಬಲ್ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಆಶ್ರಯದಲ್ಲಿ ಕಲ್ಲಮುಂಡ್ಕೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜ್ಞಾನ ವಿಕಾಸ ಕಾರ್ಯಕ್ರಮದಡಿ ಉಚಿತ ಕ್ಯಾನ್ಸರ್, ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶ್ರೀಕ್ಷೇತ್ರ ದೈಲಬೆಟ್ಟುವಿನ ಮೊಕ್ತೇಸರ ಜಯಪ್ರಕಾಶ್ ಪಡಿವಾಳ್, ಜಯಶ್ರೀ ಅಮರನಾಥ ಶೆಟ್ಟಿ ಶಿಬಿರಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಧನಂಜಯ್, ಾದರ್ ಮುಲ್ಲರ್ ನರ್ಸಿಂಗ್ ವಿಭಾಗದ ಡಾ.ಭಾಗ್ಯಶ್ರೀ, ಡಾ.ಎಸ್.ವಿ.ಅಭಿರಾಮ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಡಾ.ರಂಜನ್, ಶಾಂತರಾಮ್ ಭಟ್, ಒಕ್ಕೂಟ ಅಧ್ಯಕ್ಷ ಭೋಜ ಸುವರ್ಣ, ಓಂಕಾರ್ ಗೇಮ್ಸ್ ಕ್ಲಬ್‌ನ ಯಶೋಧರ್ ಭಟ್, ಎಸ್‌ಡಿಎಂಸಿ ಅಧ್ಯಕ್ಷ ವಸಂತ ನಾಯ್ಕ, ಕಲ್ಲಮುಂಡ್ಕೂರು ್ರೆಂಡ್ಸ್ ಸರ್ಕಲ್ ಮೇಘನಾಥ್, ವಲಯ ಮೇಲ್ವಿಚಾರಕ ಶ್ರೀನಿವಾಸ್, ಜ್ಞಾನವಿಕಾಸ ಸಮನ್ವಯಾಧಿಕಾರಿ ವಿನುತಾ ಉಪಸ್ಥಿತರಿದ್ದರು. ಮಹಿಳೆಯರಿಗೆ ಗರ್ಭಕೋಶದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಪುರುಷರಿಗೆ ಬಾಯಿಯ ಕ್ಯಾನ್ಸರ್ ತಪಾಸಣೆ ನಡೆಸಲಾಯಿತು.