ಸರಸ್ವತಿ ಸಮೂಹ ಸಂಸ್ಥೆ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯನಮಸ್ಕಾರ ನಡೆಯಿತು. ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ರಾವ್ ಮಂಕುಡೆ ಇತರರಿದ್ದರು. 
ದಕ್ಷಿಣ ಕನ್ನಡ

ವಿದ್ಯಾರ್ಥಿಗಳಿಗೆ ದೇಶಭಕ್ತಿ ಪಾಠ ಅಗತ್ಯ : ಡಾ.ಮಂಜುನಾಥ

ಸೌಮ್ಯ ಆರ್
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ರಾವ್ ಮಂಕುಡೆ ಮಾತನಾಡಿದರು. ಸರಸ್ವತಿ ಆಂಗ್ಲ ಮಾಧ್ಯಮ ವಿಭಾಗ ಅಧ್ಯಕ್ಷ ಸದಾಶಿವ ಭಟ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಪುಷ್ಪರಾಜ್ ಧ್ವಜಾರೋಹಣಗೈದರು. ಸಂಸ್ಥೆ ವಿದ್ಯಾರ್ಥಿಗಳಿಂದ ರಥಸಪ್ತಮಿ ಅಂಗವಾಗಿ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಯಿತು.
ಸರಸ್ವತಿ ಆಂಗ್ಲ ಮಾಧ್ಯಮ ವಿಭಾಗದ ಸಂಚಾಲಕ ಅಜಿತ್ ರೈ ಆರ್ತಿಲ, ಸರಸ್ವತಿ ವಿದ್ಯಾಲಯ ಪ್ರೌಢವಿಭಾಗದ ಮುಖ್ಯಗುರು ಶೈಲಶ್ರೀ ಎಸ್.ರೈ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ವಸಂತ ಕರುಂಬೋಡಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ವಸಂತ ಕರುಂಬೋಡಿ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ, ಸಹಶಿಕ್ಷಕಿ ಸುಮಂಗಳಾ ಎ. ಕಾರ್ಯಕ್ರಮ ನಿರೂಪಿಸಿದರು.