ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ಸಾಧಕರಿಗೆ ಅತ್ಯುತ್ತಮ ಸೇವಾ ಪುರಸ್ಕಾರ ಪ್ರದಾನ ಮಾಡಲಾಯಿತು. 
ದಕ್ಷಿಣ ಕನ್ನಡ

ಸಂವಿಧಾನದಿಂದ ದೇಶದಲ್ಲಿ ಸಮಾನತೆ : ಭಾಗೀರಥಿ ಮುರುಳ್ಯ

ದೇಶದ ಸಂವಿಧಾನದಡಿ ನಾವೆಲ್ಲರೂ ಒಂದು ಎನ್ನುವ ಧ್ಯೇಯೋದ್ದೇಶದಡಿ ನಡೆಯುತ್ತಿದ್ದೇವೆ. ಸಂವಿಧಾನದ ಮೌಲ್ಯಗಳಿಂದ ದೇಶದಲ್ಲಿ ಸಮಾನತೆ ಮೂಡಿದೆ ಎಂದು ಶಾಸಕಿ ಭಾಗಿರಥಿ ಮುರುಳ್ಯ ಹೇಳಿದರು.
ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸೋಮವಾರ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಹಸೀಲ್ದಾರ್ ಮಂಜುಳಾ ಎಂ. ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಸುಳ್ಯ ಸುಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಐಎಫ್‌ಎಸ್ ಪ್ರೊಬೆಷನರಿ ಸಂಕೇತ್ ವಿಜಯ್ ಅಧೋ, ಸುಳ್ಯ ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ನ.ಪಂ. ಮುಖ್ಯಾಧಿಕಾರಿ ಬಸವರಾಜ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಸುಳ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಡಾ.ನಿತೀನ್ ಪ್ರಭು ಉಪಸ್ಥಿತರಿದ್ದರು.

ಅತ್ಯುತ್ತಮ ಸೇವಾ ಪುರಸ್ಕಾರ