ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿ ಸೋಮವಾರ ಶಾಸಕ ರಾಜೇಶ್ ನಾಕ್ ಗೌರವ ವಂದನೆ ಸ್ವೀಕರಿಸಿದರು. ತಹಸೀಲ್ದಾರ್ ಮಂಜುನಾಥ್, ಬುಡಾ ಅಧ್ಯಕ್ಷ ಬೇಬಿ ಕುಂದರ್ ಮತ್ತಿತರರು ಉಪಸ್ಥಿತರಿದ್ದರು 
ದಕ್ಷಿಣ ಕನ್ನಡ

ಸಮೃದ್ಧ ಭಾರತ ನಿರ್ಮಾಣಕ್ಕೆ ಪಣ : ಜಿ.ಮಂಜುನಾಥ್

ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ವಂದಿಸಿದರು. ಶಿಕ್ಷಕ ಗೋಪಾಲಕೃಷ್ಣ ಮಾಣಿ ಕಾರ್ಯಕ್ರಮ ನಿರೂಪಿಸಿದರು. ಎಸ್‌ವಿಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರೈತ ಗೀತೆ ಹಾಗೂ ನಾಡಗೀತೆ ಹಾಡಿದರು. ಇದಕ್ಕೂ ಮೊದಲು ಪೊಲೀಸ್, ಗೃಹರಕ್ಷಕ ದಳ, ಮಾಜಿ ಸೈನಿಕರು, ವಿವಿಧ ಶಾಲೆಗಳ ಸ್ಕೌಟ್ಸ್ ಗೈಡ್ಸ್ ಮೊದಲಾದ ತಂಡಗಳಿಂದ ಪಥ ಸಂಚಲನ ಹಾಗೂ ಅತಿಥಿಗಳಿಂದ ಗೌರವ ವಂದನೆ ಸ್ವೀಕಾರ ನಡೆಯಿತು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಸಾಧಕರಿಗೆ ಸನ್ಮಾನ