ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ತಾಲೂಕುಮಟ್ಟದ ಗಣರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಪಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. 
ದಕ್ಷಿಣ ಕನ್ನಡ

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಧ್ವಜಾರೋಹಣ

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಧಾನ ಭಾಷಣಕಾರರಾಗಿದ್ದರು. ತಾಲೂಕುಮಟ್ಟದ ಚಿತ್ರಕಲಾ ಹಾಗೂ ಪ್ರಬಂಧ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಗುರುವಾಯನಕೆರೆ ಸರ್ಕಾರಿ ಪ್ರೌಢಶಾಲೆಯ ಅರ್ಮಾನ್ ರಿಯಾಜ್, ಫಾತಿಮತ್ ರಿಫಾನಾ, ಕೆಪಿಎಸ್ ಪುಂಜಾಲಕಟ್ಟೆ ಶಾಲೆಯ ಮೋಕ್ಷಿತ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂದೇಶವನ್ನು ವಾಚಿಸಲಾಯಿತು. ಪಿಡಬ್ಲ್ಯುಡಿ ಎಇಇ ಬಕ್ಕಪ್ಪ, ನ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ಮೊದಲಾದವರಿದ್ದರು.