ಸಾಂದರ್ಭಿಕ ಚಿತ್ರ 
ದಕ್ಷಿಣ ಕನ್ನಡ

ಲಾಟರಿ ಬಹುಮಾನದ ಹೆಸರಲ್ಲಿ 3.81 ಲಕ್ಷ ರೂ. ವಂಚನೆ

ಮಂಗಳೂರು: ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಂದಿದೆ ಅದನ್ನು ಪಡೆದುಕೊಳ್ಳಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು 3.81 ಲಕ್ಷ ರೂ. ಹಣ ವರ್ಗಾಯಿಸಲು ತಿಳಿಸಿ ವಂಚನೆ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
42 ವರ್ಷದ ದೂರುದಾರರಿಗೆ ಆ.14ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಂದಿದೆ ಎಂದು ನಂಬಿಸಿ, ಹಣವನ್ನು ಪಡೆಯಲು ತೆರಿಗೆ ಕಟ್ಟಬೇಕು ಎಂದು ತಿಳಿಸಿದ್ದಾನೆ.
ಇದನ್ನು ನಂಬಿದ ದೂರುದಾರರು ಅಪರಿಚಿತ ವ್ಯಕ್ತಿಯ ಕಳುಹಿಸಿದ ಗೂಗಲ್ ಪೇ, ಫೋನ್ ಪೇ ಸ್ಕಾೃನರ್ ಗಳಿಗೆ ಆ.15ರಿಂದ 26ರ ವರೆಗೆ ಹಂತ ಹಂತದವಾಗಿ 3,81,300 ರೂ. ವರ್ಗಾಯಿಸಿದ್ದಾರೆ. ಮತ್ತೆ ಕರೆ ಮಾಡಿದ ಅಪರಿಚಿತ ಲಾಟರಿ ಹಣ ಡಬಲ್ ಆಗಿದ್ದು, ಪುನಃ ಟ್ಯಾಕ್ಸ್ ಕಟ್ಟಬೇಕು ಎಂದು ಒತ್ತಾಯಿಸಿದ್ದಾನೆ. ಆಗ ದೂರುದಾರರಿಗೆ ಅದೊಂದು ಮೋಸದ ಜಾಲ ಎಂದು ಗೊತ್ತಾಗಿದೆ. ಈ ಬಗ್ಗೆ ಸೈಬರ್ ಹೆಲ್ಪ್ ಲೈನ್ ಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.