ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮತ್ತು ಕೆನರಾ ವಾಣಿಜ್ಯ, ಕೈಗಾರಿಕಾ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಕಾರ್ಯಕ್ರಮದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ಮಾತನಾಡಿದರು.
ಮಂಗಳೂರು: ಉದ್ಯೋಗ ವ್ಯಕ್ತಿಯ ಆತ್ಮವಿಶ್ವಾಸ ಮತ್ತು ಸಾಮಾಜಿಕ ಸ್ವಾಭಿಮಾನದ ಸಂಕೇತ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವ ಪೀಳಿಗೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸೃಜನಾತ್ಮಕ ಶೈಕ್ಷಣಿಕ ಕ್ರಾಂತಿಯ ಅಗತ್ಯವಿದೆ ಎಂದು ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು.
ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮತ್ತು ಕೆನರಾ ವಾಣಿಜ್ಯ, ಕೈಗಾರಿಕಾ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಸಮೃದ್ಧಿ ಕೆರಿಯರ್ ನೆಕ್ಟ್-2026 ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ಸೈದ್ಧಾಂತಿಕ ಶಿಕ್ಷಣಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಕೌಶಲ್ಯ ಮತ್ತು ತಂತ್ರಜ್ಞಾನ ಆಧಾರಿತ ಕಲಿಕೆಗೆ ಒತ್ತು ನೀಡುವುದು ಇಂದಿನ ತುರ್ತು ಅಗತ್ಯ. ಶೈಕ್ಷಣಿಕ ಕ್ರಾಂತಿಯ ಹಿನ್ನೆಲೆಯಿಂದ 1982ರಿಂದಲೂ ತನ್ನ ಧ್ಯೇಯವನ್ನು ಮುಂದುವರಿಸುತ್ತಾ ಬಂದಿರುವ ಐತಿಹಾಸಿಕ ಶಿಕ್ಷಣ ಸಂಸ್ಥೆ ಇದು. ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಬದುಕಿಗೆ ಆಸರೆಯಾಗುವ ಉದ್ಯೋಗ ಮೇಳ, ಸಂಸ್ಥೆಯ ಸಾಮಾಜಿಕ ಬದ್ಧತೆಗೆ ಸಾಕ್ಷಿಯಾಗಿದೆ. 2027ರಲ್ಲಿ ಬೃಹತ್ ಉದ್ಯೋಗ ಮೇಳವನ್ನು ನಿಮ್ಮೆಲ್ಲರ ಸಹಕಾರದೊಂದಿಗೆ ಆಯೋಜಿಸಲಿದ್ದೇವೆ ಎಂದರು.
ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮಂಗಳೂರು ಇದರ ಅಧ್ಯಕ್ಷ ಪಿ.ಬಿ ಅಹಮದ್ ಮುದಸರ್ ಮಾತನಾಡಿ, ಶೈಕ್ಷಣಿಕ ಬದಲಾವಣೆಗೆ ಪೂರಕವಾಗಿ ಯುವ ಪ್ರತಿಭೆಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ಸೂರಿನಡಿ ತರುವ ಉದ್ಯೋಗ ಮೇಳಗಳು ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತವೆ. ಇವು ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗಿ ಯುವಕರಿಗೆ ನೇರವಾಗಿ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಿ, ಯೋಗ್ಯ ಕೆಲಸ ಗಿಟ್ಟಿಸಿಕೊಳ್ಳಲು ಸುಲಭ ವೇದಿಕೆ ಕಲ್ಪಿಸುತ್ತವೆ. ದೇಶದ ಪ್ರತಿಷ್ಠಿತ 30 ಕಂಪೆನಿಗಳು ಭಾಗವಹಿಸಿದ್ದು, ಅರ್ಹ ವಿದ್ಯಾರ್ಥಿಗಳನ್ನು ನೇರ ಸಂದರ್ಶನದ ಮೂಲಕ ಸ್ಥಳದಲ್ಲಿಯೇ ಆಯ್ಕೆ ಮಾಡಿಕೊಳ್ಳಲಿದೆ ಎಂದರು.
ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಸಂತ ಕಾರಂದೂರು ಅಧ್ಯಕ್ಷತೆ ವಹಿಸಿದ್ದರು.
ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷ ಡಾ. ಬಿ. ಜಿ. ಸುವರ್ಣ, ಕಾಲೇಜಿನ ಆಡಳಿತ ಅಧಿಕಾರಿ ನಾಗೇಶ್ ಕರ್ಕೆರ, ಆಡಳಿತ ಮಂಡಳಿಯ ಸದಸ್ಯ ಚಂದನ್‌ದಾಸ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಬಿ.ಎಡ್ ವಿಭಾಗದ ಪ್ರಾಂಶುಪಾಲ ಉದಯಕುಮಾರ್ ಬಿ, ಐಕ್ಯುಎಸಿ ಸಂಯೋಜಕ ಡಾ.ಯತೀನ್, ಸಮೃದ್ಧಿ ಕೆರಿಯರ್ ನೆಕ್ಟ್-2026 ಕಾರ್ಯಕ್ರಮದ ಸಂಯೋಜಕ ಮಿಥುನ್ ಚಂದ್ರ ಆರ್.ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮೋಕ್ಷ, ದಿವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಪ್ರತೀಕ್ಷ ನಿರೂಪಿಸಿದರು.
ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ಸಮಾಜದಲ್ಲಿ ಗೌರವಾನ್ವಿತ ಮತ್ತು ಸ್ವಾವಲಂಬಿ ಜೀವನ ನಡೆಸಲು ಪ್ರತಿಯೊಬ್ಬರಿಗೂ ಯೋಗ್ಯವಾದ ಉದ್ಯೋಗ ಅತ್ಯಗತ್ಯ. ಉದ್ಯೋಗವು ಕೇವಲ ಆದಾಯದ ಮೂಲವಲ್ಲ, ಅದೊಂದು ಜೀವನ. ಶಿಕ್ಷಣದಲ್ಲಿ ಕ್ರಾಂತಿ ಮತ್ತು ಉದ್ಯೋಗ ಮೇಳಗಳ ಪರಿಣಾಮಕಾರಿ ಅನುಷ್ಠಾನದಿಂದ ಮಾತ್ರ ದೇಶದ ಪ್ರತಿಯೊಬ್ಬ ಪ್ರಜೆಗೂ ಘನತೆಯುಳ್ಳ ಬದುಕನ್ನು ಕಲ್ಪಿಸಲು ಸಾಧ್ಯ.
ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ