ಮಂಗಳೂರು : ನೀರುಮಾರ್ಗದಿಂದ ಮಾಣೂರು ಕಡೆಗೆ ಹೋಗುವ ರಸ್ತೆಯ ಸ್ವರ್ಗ ಎಂಬಲ್ಲಿ ಸ್ಕೂಟರ್ ಸ್ಕಿಡ್ ಆಗಿ ವ್ಯಕ್ತಿಗೊಬ್ಬರು ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅತಿಕಾರಿಬೆಟ್ಟು ಕವತಾರು ರವೀಂದ್ರ (43) ಮೃತಪಟ್ಟವರು.
ಇಳಿಜಾರು ರಸ್ತೆಯಲ್ಲಿ ಸ್ಕೂಟರ್ ಸವಾರ ನಿರ್ಲಕ್ಷ್ಯದಿಂದ ಸವಾರಿ ಮಾಡಿಕೊಂಡು ಹೋದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಅವರ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಕೂಡಲೇ ಅವರನ್ನು ಪಡೀಲ್ ನ ಖಾಸಗಿ ಆಸ್ಪತ್ರೆಗೆ ದಾಖಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.