ರಿಫಾಜ್‌ 
ದಕ್ಷಿಣ ಕನ್ನಡ

ಬಸ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು

ಬಸ್ ಚಾಲಕ ಹಾಗೂ ನಿರ್ವಾಹಕ ಪರಾರಿ

ಮೂಡುಬಿದಿರೆ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನಲ್ಲಿ ಶುಕ್ರವಾರ ಸಂಜೆ ಖಾಸಗಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ರಿಫಾಜ್ (19) ಎಂಬ ಯುವಕ ಮೃತಪಟ್ಟಿದ್ದಾರೆ.

ಮೂಡುಬಿದಿರೆಯ ಹಣ್ಣಿನ ಅಂಗಡಿಯಲ್ಲಿ ದುಡಿಯುತ್ತಿದ್ದ ತೋಡಾರಿನ ರಿಫಾಜ್ ಬಸ್ ರಾಂಗ್‌ಸೈಡ್‌ನಲ್ಲಿ ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸರ್ವೀಸ್ ರಸ್ತೆಯಲ್ಲಿ ಸಂಚರಿಸಬೇಕಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದಿತ್ತು. ಬಸ್ ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.