ಸಾಂದರ್ಭಿಕ ಚಿತ್ರ 
ದಕ್ಷಿಣ ಕನ್ನಡ

ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಅಪರಾಧಿಗೆ 1 ವರ್ಷ ಜೈಲು

ಮಂಗಳೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣದಲ್ಲಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಎಂಬಾತನಿಗೆ ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ವೇಣೂರು ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದ ಪ್ರಕರಣ ಇದಾಗಿದ್ದು, ಖಾಲಿದ್ ವಿರುದ್ಧ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಮತ್ತು ಎಸ್ ಸಿ ಎಸ್ಟಿ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಆಗಿನ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವ್ಯಾಲೆಂಟೈನ್ ಡಿಸೋಜ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಫೆ.26ರಂದು ಖಾಲಿದ್ ಗೆ 1 ವರ್ಷ ಕಾರಾಗೃಹ ಹಾಗೂ 10,000 ರೂ ದಂಢ ವಿಧಿಸಿ ಶಿಕ್ಷೆ ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ಅವರು ಸಮರ್ಥವಾಗಿ ವಾದ ಮಂಡನೆ ಮಾಡಿದ್ದಾರೆ.