ಭಜನಾ ಮಂಗಲೋತ್ಸವ ಸಭಾ ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಹಾಸ ಪೂಂಜ ಕಿಲ್ಲೂರುಗುತ್ತು ದಂಪತಿಯನ್ನು ಗೌರವಿಸಲಾಯಿತು. ಉಮೇಶ್ ಗಟ್ಟಿ, ಜನಾರ್ದನ ಗಟ್ಟಿ ಕನ್ನಿಮನೆ, ಸುಬ್ರಾಯ ಪೂಜಾರಿ ಭಂಡಾರಮನೆ ಮೊದಲಾದವರಿದ್ದರು.
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಆಧ್ಯಾತ್ಮಿಕ ವಿಚಾರದಲ್ಲಿ ಹಿಂದೂ ಸಮಾಜ ಮಲಗದಿದ್ದರೂ ಮಲಗಿದಂತೆ ನಟಿಸುವುದೇ ಹೆಚ್ಚು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ನೃತ್ಯ ಭಜನೆ ಆರಂಭಿಸುವ ಮೂಲಕ ಯುವಸಮುದಾಯದ ಮನದಲ್ಲಿ ಭಕ್ತಿಭಾವ ಮೂಡಿಸಿ ಆಧ್ಯಾತ್ಮಿಕತೆಯತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಮಹಾಶಿವರಾತ್ರಿ ಪ್ರಯುಕ್ತ ಇನೋಳಿ ಶ್ರೀ ಸೋಮನಾಥೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 48 ದಿನ ನಡೆದ ಸಂಧ್ಯಾ ಭಜನೆಯ ಮಂಗಲೋತ್ಸವ ಸಭಾ ಕಾರ್ಯಕ್ರಮ ಶನಿವಾರ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರಂತರ ಶ್ರಮವಹಿಸಿದ ಆಡಳಿತ ಮೊಕ್ತೇಸರ ಚಂದ್ರಹಾಸ ಪೂಂಜ ಕಿಲ್ಲೂರುಗುತ್ತು ದಂಪತಿಯನ್ನು ಅಭಿನಂದಿಸಲಾಯಿತು.
ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮಂಗಳೂರು ತಾಲೂಕು ಅಧ್ಯಕ್ಷ ಉಮೇಶ್ ಗಟ್ಟಿ, ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಜನಾರ್ದನ ಗಟ್ಟಿ ಕನ್ನಿಮನೆ, ಪಜೀರು ಅರಸು ಮುಂಡಿತ್ತಾಯ ದೈವಪಾತ್ರಿ ಸುಬ್ರಾಯ ಪೂಜಾರಿ ಭಂಡಾರಮನೆ, ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕ ಮಂಜಪ್ಪ ಕಾರ್ನವರ್, ಪ್ರಗತಿಪರ ಕೃಷಿಕ ಪ್ರಶಾಂತ್ ಮಾರ್ಲ ಧರ್ಮ, ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಆಡಳಿತ ನಿರ್ದೇಶಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಉದ್ಯಮಿಗಳಾದ ಚಂದ್ರಶೇಖರ ಶೆಟ್ಟಿ ಮಂಟಮೆ, ಪ್ರವೀಣ್ ನಾಟ್ರಕೋಡಿ ಇನೋಳಿ, ಕೊಣಾಜೆ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷ ರವೀಣಾ ಬೋಳಿಯಾರ್, ಶ್ರೀ ಕೊರಗಜ್ಜ ದೈವಸ್ಥಾನದ ಗುರಿಕಾರ ಸೋಮಯ್ಯ ಬಿ.ಸೈಟ್, ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ.ಅಳಿಯೂರು, ಕೊಣಾಜೆ ಮತ್ತು ದೇರಳಕಟ್ಟೆ ಮೇಲ್ವಿಚಾರಕ ಗಿರೀಶ್, ಅಶೋಕ್, ಸಚಿನ್ ಶೆಟ್ಟಿ ಮುಂಬೈ, ಹರಿಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರವಿ ರೈ ಪಜೀರ್ ಕಾರ್ಯಕ್ರಮ ನಿರೂಪಿಸಿದರು.