ದುಗ್ಗಲಡ್ಕ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ರೀಡಾಕೂಟವನ್ನು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಉದ್ಘಾಟಿಸಿದರು. ಸದಾನಂದ ಮಾವಜಿ, ಶೀಲಾವತಿ ಮೊದಲಾದವರಿದ್ದರು.  
ದಕ್ಷಿಣ ಕನ್ನಡ

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ

ಸುಳ್ಯ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟನೆ

ಸುಳ್ಯ: ಪ್ರತಿಯೊಬ್ಬರ ಜೀವನದಲ್ಲಿ ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕುಮಟ್ಟದ ಕ್ರೀಡಾಕೂಟ ಸಮಿತಿ ವತಿಯಿಂದ ದುಗ್ಗಲಡ್ಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕುಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಆದರೆ ಕ್ರೀಡಾ ಸೌಲಭ್ಯದ ಕೊರತೆಯಿಂದ ಗ್ರಾಮೀಣ ಪ್ರದೇಶದ ಮಕ್ಕಳು ಹಿಂದೆ ಉಳಿಯುತ್ತಿದ್ದಾರೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷೆ ಶೀಲಾವತಿ ಮಾಧವ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ, ಸುಳ್ಯ ಪಿ.ಎಂ. ಪೋಷಣ್ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಜಯಾಕುಮಾರಿ ನಿಡಿಂಜಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನೇಶ್ ಗೌಡ ಕೆ., ಪ್ರಮುಖರಾದ ಧನಂಜಯ ಸಂಪಾಜೆ, ಗೋಪಿನಾಥ ಮಿತ್ತಡ್ಕ, ಚಂದ್ರಶೇಖರ ಕೆ.ಎಸ್., ವಿಜೇತ್ ಮಾವಿನಕಟ್ಟೆ, ಚಂದ್ರಶೇಖರ ಮೋಂಟಡ್ಕ, ರಮೇಶ್ ನೀರಬಿದಿರೆ ಇತರರು ಉಪಸ್ಥಿತರಿದ್ದರು.

ಪದ್ಮನಾಭ ಎಡಮಂಗಲ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಶಿಕ್ಷಕ ಸುರೇಶ್ ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕರಾದ ಧನಂಜಯ ಮತ್ತು ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.