ಜಯಚಂದ್ರ 
ದಕ್ಷಿಣ ಕನ್ನಡ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕೊಲ್ಲಂ ನಿವಾಸಿ ಜಯಚಂದ್ರ (66) ಬಂಧಿತ ಆರೋಪಿ. 2019ರಲ್ಲಿ ಆತನ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನಾಪತ್ತೆಯಾಗಿದ್ದ. ನ್ಯಾಯಾಲಯ ಆತನ ವಿರದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ದಸ್ತಗಿರಿಗೆ ಸಿಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಕಂಕನಾಡಿ ನಗರ ಸಿಬಂದಿಯವರಾದ ಬಾಲರಾಜ್ ಮತ್ತು ರವಿ ಕುಮಾರ್ ಅವರು ಫೆ.3ರಂದು ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರಂನ ಆರೋಪಿಯ ಮನೆಯಿಂದ ಬಂಧಿಸಿ ಕರೆತಂದಿದ್ದಾರೆ.