ಆಳ್ವಾಸ್ ಕಾಲೇಜಿನಲ್ಲಿ ನಡೆದ ಅಭಿಜ್ಞ ವಿಜ್ಞಾನ ಕಾರ್ಯಾಗಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ವಿಭಾಗಗಳಲ್ಲಿ ಹ್ಯಾಂಡ್ಸ್-ಆನ್ ತರಬೇತಿ ನೀಡಲಾಯಿತು. ವಿವೇಕ್ ಆಳ್ವ, ಡಾ.ಅರುಣ್ ಎಂ.ಇಸ್ಲೂರ್, ಡಾ. ಕುರಿಯನ್, ರಮ್ಯಾ ರೈ, ತೇಜಸ್ ಡಿ. ಪೂಜಾರಿ ಹಾಗೂ ಗಣೇಶ್ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಸಂಶೋಧನೆಯಿಂದ ದೇಶ ಪ್ರಗತಿ

ಅಭಿಜ್ಞ ವಿಜ್ಞಾನ ಕಾರ್ಯಾಗಾರ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆ ಬಲಗೊಂಡಾಗ ದೇಶದ ಪ್ರಗತಿಗೆ ವೇಗ ದೊರೆಯುತ್ತದೆ. ವಿದ್ಯಾರ್ಥಿಗಳು ಆಸಕ್ತಿ, ಉತ್ಸಾಹ ಇರುವ ಕ್ಷೇತ್ರ ಆಯ್ಕೆ ಮಾಡಿಕೊಂಡು ಹೊಸತನ ಹುಡುಕಬೇಕು. ಶಿಕ್ಷಣ ಉದ್ದೇಶ ಪೂರ್ಣವಾಗಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಗುರುವಾರ ಕುವೆಂಪು ಸಭಾಂಗಣದಲ್ಲಿ ಎರಡನೇ ಆವೃತ್ತಿಯ ಅಭಿಜ್ಞ ವಿಜ್ಞಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸುರತ್ಕಲ್‌ನ ಎನ್‌ಐಟಿಕೆ ರಸಾಯನಶಾಸ್ತ್ರ ವಿಭಾಗ ಪ್ರಾಧ್ಯಾಪಕ ಡಾ.ಅರುಣ್ ಎಂ.ಇಸ್ಲೂರ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾರ್ಯಾಗಾರದ ಅಂಗವಾಗಿ ಜೈವಿಕ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ, ಸಂಖ್ಯಾಶಾಸ್ತ್ರ ಸೇರಿದಂತೆ ಒಂಬತ್ತು ವಿಜ್ಞಾನ ವಿಭಾಗಗಳಲ್ಲಿ ಹ್ಯಾಂಡ್ಸ್-ಆನ್ ತರಬೇತಿ ನೀಡಲಾಯಿತು. ಆಳ್ವಾಸ್ ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್, ವಿಜ್ಞಾನ ವಿಭಾಗದ ಡೀನ್ ರಮ್ಯಾ ರೈ, ವಿದ್ಯಾರ್ಥಿ ಸಂಯೋಜಕರಾದ ತೇಜಸ್ ಡಿ.ಪೂಜಾರಿ, ಗಣೇಶ್ ಹೆಗಡೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಪವಿತ್ರಾ, ನಿಶಾ ಕೆ.ಎಂ. ಕಾರ್ಯಕ್ರಮ ಸಂಯೋಜಿಸಿದರು. ತೇಜಸ್ ಡಿ.ಪೂಜಾರಿ ಸ್ವಾಗತಿಸಿದರು. ಖುಷಿ ಮಣ್ಣೂರು ನಿರೂಪಿಸಿದರು.