ಮಂಗಳೂರು: ಕುಂಟಿಕಾನ ಬಸ್ಸು ತಂಗುದಾಣದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದಡಿ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯೆಯ್ಯಡಿ ಪದವು ಗುಂಡಳಿಕೆ ನಿವಾಸಿ ಅಭಿರಾಜ್ (38), ಸುಳ್ಯ ಐವರ್ನಾಡು ನಿವಾಸಿ ಎನ್.ಬಿ. ಲೋಕೇಶ್ (19), ಮೂಲ್ಕಿ ಕಾರ್ನಾಡು ನಿವಾಸಿ ಅರವಿಂದ್ (33) ಬಂಧಿತ ಆರೋಪಿಗಳು. ಪೊಲೀಸರು ಗಸ್ತಿನಲ್ಲಿದ್ದಾಗ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಆರೋಪಿಗಳನ್ನು ವಿಚಾರಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಮೂವರು ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.