ಎಂ.ಎಲ್.ಅಶ್ವಿನಿ 
ದಕ್ಷಿಣ ಕನ್ನಡ

ಟೋಲ್ ಸಮಸ್ಯೆ ಕುರಿತು ಕೇಂದ್ರಕ್ಕೆ ಮನವರಿಕೆ : ಎಂ.ಎಲ್.ಅಶ್ವಿನಿ

ಸೌಮ್ಯ ಆರ್
ಕಾಸರಗೋಡು: ಕುಂಬಳೆ ಆರಿಕ್ಕಾಡಿಯಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ಟೋಲ್ ಪ್ಲಾಜಾ ಕಾನೂನು ಮತ್ತು ಕೇಂದ್ರ ಸಾರಿಗೆ ಇಲಾಖೆ ನಿಲುವುಗಳಿಗೆ ವಿರುದ್ಧವಾಗಿದ್ದು, ಸಮಸ್ಯೆಯನ್ನು ಕೇಂದ್ರ ಬಿಜೆಪಿ ನೇತೃತ್ವದ ಗಮನಕ್ಕೆ ತರಲಾಗಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ತಿಳಿಸಿದ್ದಾರೆ.
ಕುಂಬಳೆಯ ಟೋಲ್ ಪ್ಲಾಜಾ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಶೀಘ್ರವೇ ಕೇಂದ್ರ ನೇತೃತ್ವದಿಂದ ತೀರ್ಮಾನ ಬರಲಿದೆ. ಅನಧಿಕೃತವಾಗಿ ನಿರ್ಮಾಣಗೊಳ್ಳುತ್ತಿರುವ ಟೋಲ್ ಪ್ಲಾಜಾದ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಲಾಗಿದ್ದು, ಸಮಸ್ಯೆ ಬಗ್ಗೆ ಕೇಂದ್ರ ಮಧ್ಯ ಪ್ರವೇಶಿಸಲಿದ್ದು, ಸಮಸ್ಯೆಗೆ ಪರಿಹಾರ ಸಿಗಲಿದೆ. ಟೋಲ್ ಬೂತ್ ಸ್ಥಾಪಿಸುವುದನ್ನು ಬಿಜೆಪಿ ಹಿಂದಿನಿಂದಲೂ ವಿರೋಧಿಸಿಸುತ್ತಾ ಬಂದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರೀಜಿನಲ್ ಆಫೀಸರ್ ಸಹಿತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೆ ಪ್ರಾಧಿಕಾರದ ಕೆಲವು ಹಿರಿಯ ಅಧಿಕಾರಿಗಳ ಹಠಮಾರಿ ಧೋರಣೆಯಿಂದ ಸಮಸ್ಯೆ ಉಂಟಾಗಿದೆ. ಇದನ್ನು ಕೇಂದ್ರ ಬಿಜೆಪಿ ಮತ್ತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. ಟೋಲ್ ವಸೂಲಿ ಜಾರಿಗೆ ಬಂದಲ್ಲಿ ಕಾಸರಗೋಡು, ಮಂಜೇಶ್ವರ ತಾಲೂಕಿನ ಜನತೆ ಎದುರಿಸಬೇಕಾದ ಸಮಸ್ಯೆಯನ್ನು ಕೇಂದ್ರಕ್ಕೆ ತಿಳಿಸಲಾಗಿದೆ.
ಪ್ರಸಕ್ತ ವಿಷಯದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯೊಂದಿಗೆ ಸಮಾಲೋಚಿಸಿ ಪರಿಹಾರ ಒದಗಿಸುವ ಭರವಸೆಯನ್ನು ಕೇಂದ್ರ ನೀಡಿದೆ ಎಂದು ಎಂ.ಎಲ್.ಅಶ್ವಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.