ಕುಲ್ಕುಂದದಲ್ಲಿ ಮರ ಉರುಳಿ ಬಿದ್ದು ವಿದ್ಯುತ್ ಕಂಬ ತಂಡಾಗಿರುವುದು. 
ದಕ್ಷಿಣ ಕನ್ನಡ

ರಾಜ್ಯ ಹೆದ್ದಾರಿಗೆ ಮರ ಬಿದ್ದು ಸಂಚಾರ ಸ್ಥಗಿತ

ಮಂಗಳೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ

ಸುಬ್ರಹ್ಮಣ್ಯ: ಮಂಗಳೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಕುಲ್ಕುಂದದ ವಿಷ್ಣುಮೂರ್ತಿ ದೈವಸ್ಥಾನದ ಬಳಿ ಶುಕ್ರವಾರ ರಾತ್ರಿ ಬೃಹತ್ ಮರ ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳೀಯರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಯಾವುದೇ ಮಳೆ, ಗಾಳಿ ಇಲ್ಲದೆ ಮರ ಏಕಾಏಕಿ ಉರುಳಿ ವಿದ್ಯುತ್ ತಂತಿ ಮೇಲೆ ಬಿದ್ದ ಕಾರಣ 5ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಮೆಸ್ಕಾಂ ಇಲಾಖೆಗೆ ಅಪಾರ ನಷ್ಟ ಸಂಭವಿಸಿದೆ.

ಗ್ರಾಮೀಣ ಭಾಗದಲ್ಲಿ ಮಳೆ

ಗ್ರಾಮೀಣ ಭಾಗಗಳಾದ ಗುತ್ತಿಗಾರು, ಬೆಳ್ಳಾರೆ, ಪಂಜ, ದೊಡ್ಡತೋಟ ಪ್ರದೇಶದಲ್ಲಿ ಶುಕ್ರವಾರ ಭಾರಿ ಗಾಳಿ, ಮಳೆ ಸುರಿದಿದೆ. ಇದರಿಂದಾಗಿ ಮರಗಳು ಉರುಳಿ ವಿದ್ಯುತ್ ತಂತಿಗೆ ಬಿದ್ದಿದ್ದು ಅನೇಕ ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಬಳಿಕ ಮೆಸ್ಕಾಂ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದುರಸ್ತಿ ಮಾಡಿದ್ದಾರೆ.