ಕಡಂದಲೆಪಾಲಡ್ಕದಲ್ಲಿ ನಡೆದ ಉಚಿತ ಕ್ಯಾನ್ಸರ್, ಆರೋಗ್ಯ ತಪಾಸಣಾ ಶಿಬಿರದಲ್ಲಿ ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಯ ಸಿ.ಅಂಚನ್, ಕೆ.ಪಿ.ಸುಚರಿತ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ, ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.  
ದಕ್ಷಿಣ ಕನ್ನಡ

ಆರಂಭಿಕ ಹಂತದಲ್ಲೇ ಕ್ಯಾನ್ಸರ್‌ಗೆ ಚಿಕಿತ್ಸೆ ಮುಖ್ಯ

ಆರೋಗ್ಯ ತಪಾಸಣಾ ಶಿಬಿರ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಕ್ಯಾನ್ಸರ್ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ. ನಮ್ಮ ತಂದೆ-ತಾಯಿ ಇದೇ ಊರಿನವರಾಗಿರುವುದರಿಂದ ನಮ್ಮೂರಿನ ಜನರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಡಾ.ಅಮರಶ್ರೀ ಅಮರನಾಥ್ ಶೆಟ್ಟಿ ಹೇಳಿದರು.

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಕಾರದಲ್ಲಿ ಕೆ.ಅಮರನಾಥ ಶೆಟ್ಟಿ ಚಾರಿಟೆಬಲ್ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಸಹಯೋಗದಲ್ಲಿ ಭಾನುವಾರ ಕಡಂದಲೆಪಾಲಡ್ಕದಲ್ಲಿ ಉಚಿತ ಕ್ಯಾನ್ಸರ್ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಬಿಲ್ಲವ ಸಂಘ ಉಪಾಧ್ಯಕ್ಷ ಜಯ ಸಿ.ಅಂಚನ್, ದ.ಕ. ಹಾಲು ಉತ್ಪಾದಕರ ಸಹಕಾರಿ ಸಂಘ ನಿರ್ದೇಶಕ ಕೆ.ಪಿ.ಸುಚರಿತ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮೂಡಬಿದಿರೆ ತಾಲೂಕು ಯೋಜನಾಧಿಕಾರಿ ಧನಂಜಯ್, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡಾ.ನಿಖಿಲ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಡಾ.ರಂಜನ್, ಮಾಜಿ ತಾಪಂ ಸದಸ್ಯ ಹರಿಪ್ರಸಾದ್ ಶೆಟ್ಟಿ, ಜನಜಾಗೃತಿ ಸದಸ್ಯ ಟಿ.ಎನ್.ಕೆಂಬಾರೆ, ವಲಯಾಧ್ಯಕ್ಷ ಸುಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿನುತಾ ಶೆಟ್ಟಿ ವಂದಿಸಿದರು. ರಶ್ಮಿತಾ ಜನತಾನಗರ ನಿರೂಪಿಸಿದರು.