ಸಾಂದರ್ಭಿಕ ಚಿತ್ರ 
ದಕ್ಷಿಣ ಕನ್ನಡ

ಮಂಗಳೂರು ಮಾದಕ ವಸ್ತು ಸೇವನೆ ಇಬ್ಬರ ಬಂಧನ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ಸೇವನೆ ಮಾಡಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಗಾಂಧಿನಗರ ಜಂಕ್ಷನ್‌ನ ಸಾರ್ವಜನಿಕ ಸ್ಥಳದಲ್ಲಿ ಮಾದಕ ಸೇವನೆ ಮಾಡಿದ ಆರೋಪದಲ್ಲಿ ಪಂಜಿಮೊಗರು ಮನೆಗುಡ್ಡೆ ಅಂಗಡಿ ನಿವಾಸಿ ಮುತ್ತೇಶ್ (34) ಎಂಬಾತನನ್ನು ಬಂಧಿಸಲಾಗಿದೆ.
ಆ.19ರಂದು ಸಂಜೆ 6.30ಕ್ಕೆ ಗಾಂಧಿನಗರ ಜಂಕ್ಷನ್ ಸಾರ್ವಜನಿಕ ಸ್ಥಳದಲ್ಲಿ ಮುತ್ತೇಶ್ ಅನುಮಾನಾಸ್ಪದವಾಗಿ ನಿಂತಿದ್ದ. ಕಾವೂರು ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತುವನ್ನು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿರುತ್ತಾನೆ. ನಂತರ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆ ತಾಲೂಕು ಮಾರ್ಪಾಡಿ ಗ್ರಾಮದ ಸ್ವರಾಜ್ ಮೈದಾನದ ಬಳಿ ನಿರ್ಜನ ಪ್ರದೇಶದಲ್ಲಿ ಯುವಕ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಗೋಗುಡ್ಡೆ ಅಸ್ಮಾ ಮಂಜಿಲ್ ನಿವಾಸಿ ಸಾನ್ (28) ಎಂಬಾತನನ್ನು ಬಂಧಿಸಲಾಗಿದೆ.
ಆ.19ರಂದು ಮೂಡುಬಿದಿರೆ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.