ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಮಾತನಾಡಿದರು. 
ದಕ್ಷಿಣ ಕನ್ನಡ

ವಿದ್ಯಾರ್ಥಿಗಳು ದೃಢಪಡಿಸಿ ಆಸಕ್ತಿಯ ವಲಯ : ಡಾ.ಹೇಮಗಿರಿ ಕೆ.

ಸಾಧಕ ವಿದ್ಯಾರ್ಥಿ, ಉಪನ್ಯಾಸಕರಿಗೆ ಸನ್ಮಾನ

ಪಡೆದ ಬಹುಮಾನಗಳೆಲ್ಲ ಮುಂದಿನ ಸಾಧನೆಗೆ ಪ್ರೇರಣೆಯಾಗಲಿ. ಸೋಲು ಹೊಸ ಅನುಭವ ನೀಡುತ್ತದೆ. ಫಲಿತಾಂಶಗಳ ನಿರೀಕ್ಷೆ ಬಿಟ್ಟು ಪ್ರಯತ್ನಶೀಲರಾಗಬೇಕು. ಪಠ್ಯದ ಜತೆಗೆ ವಿನೂತನ ಕೌಶಲ್ಯಗಳನ್ನು ಮೈಗೂಡಿಸಿ ಬಹುಮುಖ ಪ್ರತಿಭೆಗಳಾಗಿ ಬೆಳೆದಾಗ ಸಮಾಜ ನಿಮ್ಮನ್ನು ಗುರುತಿಸುತ್ತದೆ.

ಮೌಲ್ಯಯುತ ಶಿಕ್ಷಣ ಮತ್ತು ಜೀವನ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಡುವುದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮಹತ್ತರ ಉದ್ದೇಶವಾಗಿದೆ. ಇದನ್ನು ಹಿರಿಯ ವಿದ್ಯಾರ್ಥಿಗಳು ಸಾಬೀತು ಮಾಡಿದ್ದಾರೆ. ಇದು ಎಲ್ಲರಿಗೂ ಸ್ಫೂರ್ತಿ ಹಾಗೂ ಪ್ರೇರಣೆಯಾಗಬೇಕು.